Home ಟ್ರೆಂಡಿಂಗ್ ಸುದ್ದಿ/ವೈರಲ್‌ ಸುದ್ದಿ ಉಡುಪಿ | ಟಾಯ್ಲೆಟ್‌ ಕೇಸ್:‌ SIT ತನಿಖೆ ಕೋರಿ ರಾಜ್ಯಪಾಲರನ್ನು ಭೇಟಿಯಾದ ರಾಜ್ಯ ಬಿಜೆಪಿ

ಉಡುಪಿ | ಟಾಯ್ಲೆಟ್‌ ಕೇಸ್:‌ SIT ತನಿಖೆ ಕೋರಿ ರಾಜ್ಯಪಾಲರನ್ನು ಭೇಟಿಯಾದ ರಾಜ್ಯ ಬಿಜೆಪಿ

0

ಬೆಂಗಳೂರು: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ಟಾಯ್ಲೆಟ್‌ ಪ್ರಕರಣವನ್ನು ಈಗ ಬಿಜೆಪಿ ರಾಜಭವನಕ್ಕೆ ಕೊಂಡೊಯ್ದಿದ್ದು. ಅದು SIT ರಚನೆಗಾಗಿ ಆಗ್ರಹಿಸಿದೆ. ಮೊನ್ನೆಯಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಶೇಷ ತನಿಖಾ ತಂಡ (SIT) ರಚಿಸುವ ಪ್ರಶ್ನೆಯೇ ಇಲ್ಲ ಎಂದಿದ್ದರು.

ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ದೊಂದಿಗೆ ಆರೋಪಿ ಮುಸ್ಲಿಂ ಹುಡುಗಿಯರು ಸಂಪರ್ಕ ಹೊಂದಿದ್ದಾರೆ ಎಂದು ನಿಯೋಗವು ರಾಜ್ಯಪಾಲರ ಗಮನ ಸೆಳೆಯಿತು.

ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಡಿವೈಎಸ್ಪಿ ಶ್ರೇಣಿಯ ಅಧಿಕಾರಿಯೊಬ್ಬರು ಈ ಬಗ್ಗೆ ತನಿಖೆ ನಡೆಸುತ್ತಿರುವುದು ದುರದೃಷ್ಟಕರ ಎಂದರು.

“ಈ ಕಾರಣಕ್ಕಾಗಿಯೇ ತಾವು SIT ರಚನೆಗೆ ಒತ್ತಾಯಿಸುತ್ತಿರುವುದು” ಎಂದು ಹೇಳಿದರು.

ಮುಲ್ಕಿ| ಹೆಂಗಸು ಸ್ನಾನ ಮಾಡುವಾಗ ವಿಡಿಯೋ ಮಾಡಿ ಸಿಕ್ಕಿಬಿದ್ದ ಹಿಂ ಜಾ ವೇ ಕಾರ್ಯಕರ್ತ

ಕೇಂದ್ರ ಗೃಹ ಸಚಿವರು ಕೂಡ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ ಆದರೆ ಮುಖ್ಯಮಂತ್ರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಅವರು ಹೇಳಿದರು.

“ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಎಸ್ಐಟಿ ತನಿಖೆಗೆ ಮನವಿ ಮಾಡಿದ್ದೇವೆ. ಆರೋಪಿ ವಿದ್ಯಾರ್ಥಿಗಳು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ದೊಂದಿಗೆ ಸಂಪರ್ಕ ಹೊಂದಿರುವ ಬಗ್ಗೆ ಅವರ ಗಮನಕ್ಕೆ ತರಲಾಗಿದೆ. ಸಮಗ್ರ ತನಿಖೆಗೆ ನಾವು ಒತ್ತಾಯಿಸಿದ್ದೇವೆ” ಎಂದು ಅವರು ಹೇಳಿದರು.

ಮೂವರು ಮುಸ್ಲಿಂ ಹುಡುಗಿಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸುತ್ತಿದೆ ಮತ್ತು ಇದು ಹಿಂದೂ ಹುಡುಗಿಯರ ವಿರುದ್ಧದ ಸಂಘಟಿತ ಅಪರಾಧ ಎಂದು ಅದು ಹೇಳಿದೆ. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುವ ಮೂಲಕ ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ವಿಷಯದ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ಮಹಿಳಾ ಕಾರ್ಯಕರ್ತೆ ರಶ್ಮಿ ಸಮಂತ್ ಅವರಿಗೆ ಕರ್ನಾಟಕ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ನಡುವೆ, ಮುಸ್ಲಿಂ ಹುಡುಗಿಯರ ಬಗ್ಗೆ ದೂರು ನೀಡಲು ಸಂತ್ರಸ್ತೆ ಸಿದ್ಧರಿಲ್ಲ ಎಂದು ಪ್ಯಾರಾ ಮೆಡಿಕಲ್ ಕಾಲೇಜು ಸಮರ್ಥಿಸಿಕೊಂಡಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣವನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದರು.

ಇದಾದ ನಂತರದ ಬೆಳವಣಿಗೆಯಲ್ಲಿ ಕರ್ನಾಟಕ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಖ್ಯಾತ ನಟಿ ಮತ್ತು ರಾಜಕಾರಣಿ ಖುಷ್ಬೂ ಸುಂದರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ಉಡುಪಿಗೆ ಆಗಮಿಸಿದ್ದರು.

ಇದನ್ನೂ ಓದಿ: ಉಡುಪಿ | ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲು

ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಡಿವೈಎಸ್ಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಯುತ್ತಿದ್ದು, ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದೂ ಅವರು ಹೇಳಿದ್ದರು.

ಕೇಂದ್ರ ಮಹಿಳಾ ಆಯೋಗದ ಸದಸ್ಯರು ಭೇಟಿ ನೀಡಿ ತನಿಖೆ ನಡೆಸಿ ಕಾಲೇಜಿನ ಟಾಯ್ಲೆಟ್ಟಿನಲ್ಲಿ ಯಾವುದೇ ಕೆಮೆರಾ ಇರಲಿಲ್ಲ ಎಂದು ಹೇಳಿದ್ದಾರೆ ಎಂದು ಅವರು ಹೇಳಿದರು.

You cannot copy content of this page

Exit mobile version