Tuesday, October 28, 2025

ಸತ್ಯ | ನ್ಯಾಯ |ಧರ್ಮ

ಉಡುಪಿ ಶೌಚಾಲಯದಲ್ಲಿ ಕೆಮೆರಾ ಇರಿಸಿದ ವಿವಾದ: ಮೂವರ ವಿರುದ್ಧ FIR

ಉಡುಪಿ: ಕಾಲೇಜು ಮಟ್ಟದಲ್ಲೇ ತಣ್ಣಗಾಗಿದ್ದ ಶೌಚಾಲಯದಲ್ಲಿ ಕೆಮೆರಾ ಇಟ್ಟ ವಿವಾದವು ಬಲಪಂಥೀಯ ಸಂಘಟನೆಗಳು ಮತ್ತು ಬಿಜೆಪಿ ಹೋರಾಟದೊಂದಿಗೆ ಮತ್ತೆ ಮುನ್ನೆಲೆಗೆ ಬಂದು ಈಗ ಮೂವರು ವಿದ್ಯಾರ್ಥಿನಿಯರ ವಿರುದ್ಧ FIR ದಾಖಲಿಸಲಾಗಿದೆ.

ಇದೀಗ ಮೂವರು ವಿದ್ಯಾರ್ಥಿನಿಯರ ವಿರುದ್ಧ FIR ದಾಖಲಾಗಿದ್ದು, ಐಪಿಸಿ ಸೆಕ್ಷನ್ 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೋಲಿಸರು ಸುಮೋಟೋ ಕೇಸ್​ ದಾಖಲಿಸಿಕೊಂಡಿದ್ದಾರೆ.

ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ  ದಾಖಲಿಸಿದ್ದಾರೆ.

ಈ ಸಂಬಂಧ ಕಾಲೇಜು ನಿರ್ದೇಶಕಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮೂವರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌ ಎಂದಿದ್ದರು.

ನಂತರ ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ಜಟಾಪಟಿ ಆರಂಭವಾಗಿ ಪೊಲೀಸರು ಸ್ವಪ್ರೇರಣೆಯಿಂದ ಕೇಸು ದಾಖಲಿಸಿಕೊಳ್ಳಬೇಕೆಂದು ಹೋರಾಟ ಆರಂಭವಾಗಿತ್ತು.

ಈ ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಮೂಲಕ ತನಿಖೆ ನಡೆಸಲಾಗುವುದು. ಈ ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು. ಇದು ಅತೀ ಸೂಕ್ಷ್ಮ ವಿಚಾರವಾಗಿದೆ. ಹೆಣ್ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್‌ ಹೇಳಿದ್ದಾರೆ.

ಇವತ್ತು ಉಡುಪಿಗೆ ಆಗಮಿಸಲಿರುವ ರಾಷ್ಟ್ರೀಯ ಮಹಿಳಾ ಆಯೋಗದ ದಕ್ಷಿಣ ಭಾರತ ಸದಸ್ಯೆ ಖುಷ್ಬು ಸುಂದರ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.

ಸುಳ್ಳು ಸುದ್ದಿ ಹಬ್ಬಿಸಿದಾತನ ವಿರುದ್ಧ ದೂರು ದಾಖಲು:

ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿ, ಎಡಿಟ್‌ ಮಾಡಿದ ವಿಡಿಯೋವೊಂದು ಯೂಟ್ಯೂಬ್‌ ಚಾನೆಲ್‌ ನಲ್ಲಿ ಆಪ್ಲೋಡ್‌ ಆಗಿದ್ದು, ಇದನ್ನು  ಕಾಲು ಸಿಂಗ್‌ ಚೌಹಣ್‌ ಎನ್ನುವಾತ ಟ್ವಿಟರ್‌ ನಲ್ಲಿ ಪೋಸ್ಟ್‌ ಮಾಡಿದ್ದಾನೆ. ಈತನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ,  ಕೋಮು ದ್ವೇಷ ಉಂಟು ಮಾಡಿ, ಸೌಹಾರ್ದತೆಗೆ ಭಾದಕವಾಗುವ ಕೃತ್ಯದ ಅಡಿಯಲ್ಲಿ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page