Monday, June 24, 2024

ಸತ್ಯ | ನ್ಯಾಯ |ಧರ್ಮ

ಉಡುಪಿ: ವೀಡಿಯೋ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ

ಉಡುಪಿ, ಆ 07 : ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಮಹತ್ವದ ಆದೇಶ ಹೊರಡಿಸಿದೆ.

ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ವೇಳೆ ಮೂವರು ವಿದ್ಯಾರ್ಥಿನಿಯರು ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ನಾವು ತಮಾಷೆಗಾಗಿ ಮಿಡಿಯೋ ಮಾಡಿದ್ದೇವೆ ನಂತರ ವಿಡಿಯೊ ಡಿಲೀಟ್ ಮಾಡಿದ್ದೇವೆ ಎಂದು ಹೇಳಿದ್ದಾರೆ. ಬೇರೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಲು ಹೋಗಿ ಮತ್ತೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದೇವೆ. ಅದನ್ನು ಕೂಡಲೇ ಡಿಲೀಟ್ ಮಾಡಿದ್ದೇವ ಎಂದು ಹೇಳಿದ್ದಾರೆ. ನಾವು ವಿಡಿಯೋ ಮಾಡಿದ್ದು, ನಿಜ, ಆದರೆ ಉದ್ದೇಶರ್ವಕವಾಗಿ ಮಾಡಿಲ್ಲ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಜುಲೈ 18ರಂದು ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬಂದ ತಕ್ಷಣ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಚಾರ್ಯರು ಅಮಾನತು ಮಾಡಿದ್ದರು. ಪ್ರಕರಣ ಭಾರೀ ಸದ್ದು ಮಾಡಿದ್ದರಿಂದ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಜುಲೈ 26ರಂದು ಸುಮೊಟೋ ಪ್ರಕರಣವನ್ನು ದಾಖಲಿಸಿದ್ದರು. ಅದಾದ ಬಳಿಕ ತನಿಖಾಧಿಕಾರಿಯನ್ನು ಕೂಡ ಬದಲಾಯಿಸಿ, ಕುಂದಾಪುರ ಡಿವೈಎಸ್‌ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು.

ಸದ್ಯ ಪೊಲೀಸರು ಮೊಬೈಲ್ ನ್ನು ಎಸ್ ಎಸ್ ಎಲ್ ತನಿಖೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಚುರುಕಾಗಿದ್ದು, ಗೌಪ್ಯ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದಾರೆ. ಪೊಲೀಸರು ಕರೆದಾಗ ತನಿಖೆಗೆ ಹುದು ಹಾಜರಾಗಬೇಕು ಎಂದು ಉಡುಪಿ JMFC ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಈ ನಡುವೆ ಎರಡು ಬಾರಿ ಭೇಟಿಯಾಗಿ ಸಂತ್ರಸ್ತ್ರ ವಿದ್ಯಾರ್ಥಿನಿಯ ಹೇಳಿಕೆಯನ್ನೂ, ಪೊಲೀಸರು ದಾಖಲಿಸಿಕೊಂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿ ಪ್ರಕರಣದ ಸಂಬಂಧ ಹಲವು ವಿಚಾರಗಳನ್ನು ಕಲೆ ಹಾಕಿದ್ದಾರೆ, ಈಗ ಪ್ರಕರಣ ಸಂಬಂಧ ವಿಚಾರಣಾಧಿಕಾರಿ ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರ ಬದಲು ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು