ಉದ್ಯಮಿ ಪುತ್ರನನ್ನು ಅಪಹರಸಿ 25 ಲಕ್ಷ ಸುಲಿಗೆ : ಇಬ್ಬರು ಬಂಧನ

ಬೆಂಗಳೂರು: ಗುತ್ತಿಗೆದಾರ ಹಾಗೂ ಉದ್ಯಮಿ ರವಿ ಅವರ ಪುತ್ರ ಸೂರಜ್‌ ಎಂಬಾತನನ್ನು ಅಪಹರಿಸಿ 25 ಲಕ್ಷ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ಬ. ನಿಂಬರಗಿ, ಬಂಧಿತ ಆರೋಪಿಗಳಿಂದ 20 ಲಕ್ಷ ನಗದು ಹಣ ಸೇರಿದಂತೆ ಏರ್‌ಗನ್‌ ವಶಕ್ಕೆ ಪಡೆಯಲಾಗಿದೆ, ಆರೋಪಿಗಳು ಪುಷ್ಪಾ (30) ಮತ್ತು ರಾಕೇಶ್‌ (27) ಎಂದು ತಿಳಿದು ಬಂದಿದ್ದು, ಪುಷ್ಪ ಎಂಬುವರು ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯ (ಸ್ಯಾಟಲೈಟ್‌ ಬಸ್‌ ನಿಲ್ದಾಣ) ಎ.ಪಿ.ಜೆ ಅಬ್ದುಲ್‌ ಕಲಾಂ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷೆ ಯಾಗಿದ್ದು , ಆಕೆಯ ಸಂಬಂಧಿ ರಾಕೇಶ್‌, ಮೈಸೂರು ರಸ್ತೆಯ ಶಾರದಾ ಶಾಲೆ ಬಳಿ ನಿವಾಸಿ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಅರ್ಜುನ್‌ ಹಾಗೂ ಸಂತೋಷ್‌ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಶೋಧ ನಡೆಯುತ್ತಿದೆ ಎಂದು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು