Tuesday, January 13, 2026

ಸತ್ಯ | ನ್ಯಾಯ |ಧರ್ಮ

ಉದ್ಯಾನ್ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ!

ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹತ್ತಿಕೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಬೆಂಕಿ ಅನಾಹುತಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ರೈಲು ಸಂಖ್ಯೆ 11301, ಉದ್ಯಾನ್ ಎಕ್ಸ್‌ಪ್ರೆಸ್ ಬೆಳಿಗ್ಗೆ 5:45 ಕ್ಕೆ ಕೆಎಸ್‌ಆರ್ ರೈಲು ನಿಲ್ದಾಣಕ್ಕೆ ತಲುಪಿತು. ಪ್ಲಾಟ್‌ಫಾರ್ಮ್ ಸಂಖ್ಯೆ 3ರಲ್ಲಿ ರೈಲು ನಿಂತಿದ್ದಾಗ ಬೆಳಗ್ಗೆ 7:10ರ ಸುಮಾರಿಗೆ ಎರಡು ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿತು. ತಕ್ಷಣ ವಿಚಾರ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೆಲವೇ ನಿಮಿಷಗಳಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ರೈಲಿನ ಬಿ1 ಮತ್ತು ಬಿ2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಕವಿದದ್ದನ್ನು ಕಂಡು ಸ್ಥಳದಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದರು. ಬೆಂಕಿ ಅನಾಹುತದಲ್ಲಿ ಕಾರಣ ಇನ್ನೂ ತಿಳಿದುಬಂದಿಲ್ಲ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page