ಪಂಜಾಬ್: ಅಕ್ಟೋಬರ್ 1 ರಿಂದ ರಾಜ್ಯದಾದ್ಯಂತ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ʼವಿಶ್ವವಿದ್ಯಾಲಯ ಅನುದಾನ ಆಯೋಗದʼ (ಯುಜಿಸಿ) 7ನೇ ವೇತನ ಶ್ರೇಣೆಯನ್ನು ಜಾರಿಗೆ ತರಲಿದೆ ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಶಿಕ್ಷಕರ ದಿನದಂದು ಘೋಷಿಸಿದ್ದಾರೆ.
ಯುಜಿಸಿ 7ನೇ ವೇತನ ಆಯೋಗವು ರಾಜ್ಯದ ಶಿಕ್ಷಕರ ಪ್ರಮುಖ ಬೇಡಿಕೆಯಾಗಿತ್ತು ಎಂದು ತಿಳಿಸಿದರು. ಶಿಕ್ಷಕರ ಕೊರತೆಯನ್ನು ನೀಗಿಸಲು ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಅಧ್ಯಾಪಕ ಶಿಕ್ಷಕರನ್ನು ನೇಮಿಸಿಕೊಳ್ಳಲು ಅನುಮೋದನೆ ನೀಡಲಾಗಿದ್ದು, ಈ ಕುರಿತು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದರು.
ಕಳೆದ 18-20 ವರ್ಷಗಳಿಂದ ಕಾಲೇಜುಗಳಲ್ಲಿ ಬೋಧಿಸುತ್ತಿದ್ದ ಅತಿಥಿ ಅಧ್ಯಾಪಕರ ವೇತನವನ್ನು ಹೆಚ್ಚಿಸಲಾಗುವುದು ಎಂದು ಹೇಳಿರುವುದನ್ನು ಪಿಟಿಐ ವರದಿ ಮಾಡಿದೆ.