Monday, February 2, 2026

ಸತ್ಯ | ನ್ಯಾಯ |ಧರ್ಮ

ಕೇಂದ್ರ ಬಜೆಟ್‌ ಕರ್ನಾಟಕಕ್ಕೆ ಖಾಲಿ ಚೊಂಬು ನೀಡಲಾಗಿದೆ – ಸಿಎಂ ಸಿದ್ದರಾಮಯ್ಯ ಟೀಕೆ

ಕಲಬುರಗಿ: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್‌ನಲ್ಲಿ ಏನೂ ನೀಡಿಲ್ಲ. ಕರ್ನಾಟಕಕ್ಕೆ ಒಂದು ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್ ವಿರುದ್ಧ ಸಿಎಂ ಸಿದ್ದರಾಮಯ್ಯ  ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡೆರಡು ಬೆಂಗಳೂರು-ಹೈದರಾಬಾದ್ ಹಾಗೂ ಬೆಂಗಳೂರು-ಚೆನ್ನೈ ಹೈಸ್ಪಿಡ್ ರೈಲು ನೀಡಿದ್ದಾರೆ. ಅದು ಕೂಡ 5 ವರ್ಷ ಸಮಯ ತೆಗೆದುಕೊಂಡಿದ್ದಾರೆ. ನಮಗೆ ಬೆಂಗಳೂರು-ಮುಂಬೈ, ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ರೈಲು ಬೇಕಾಗಿತ್ತು. ನೀರಾವರಿ ಯೋಜನೆಗೆ ಹಣ ಕೇಳಿದ್ದೇವೆ. ಆದರೆ, ನೀರಾವರಿ ಯೋಜನೆಗೆ ಒಂದೇ ಒಂದು ಶಬ್ದ ಇಲ್ಲ. ಅಪರ್ ಕೃಷ್ಣಾ ಹಾಗೂ ಅಪರ್ ಭದ್ರಾ ಯೋಜನೆಗೆ ಸಹಾಯ ಕೇಳಿದ್ರೂ ಏನು ನೀಡಿಲ್ಲ. ಈ ಹಿಂದೆ ಬಜೆಟ್‌ನಲ್ಲಿ ಯೋಜನೆಗೆ 5,200 ಕೋಟಿ ಹಣ ನೀಡುತ್ತೇವೆ ಎಂದಿದ್ದರು. ಆದರೆ, ಒಂದು ರೂಪಾಯಿ ಸಹ ಕೊಟ್ಟಿಲ್ಲ. ಮೇಕೆದಾಟು ಯೋಜನೆ ಪ್ರಕರಣ ಸಂಬಂಧ ತಮಿಳನಾಡು ಅರ್ಜಿ ವಜಾ ಆಗಿದೆ. ಆದರೂ ಸಹ ಆ ಯೋಜನೆಗೆ ಬಜೆಟ್‌ನಲ್ಲಿ ಹಣ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ. ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಪರಿಸರ ಇಲಾಖೆ ಅನುಮತಿ ನೀಡಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನಾವು ಕ್ಲಿಯರ್ ಮಾಡುವುದಾಗಿ ಯಡಿಯೂರಪ್ಪ ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳಿದ್ದರು. ಆದರೆ, ಕೇಂದ್ರ ಪರಿಸರ ಇಲಾಖೆ ಬಜೆಟ್‌ನಲ್ಲಿ ಈ ಬಾರಿ ಸಹ ಅನುಮತಿ ಕೊಟ್ಟಿಲ್ಲ. ಈ ಮೂಲಕ ಕರ್ನಾಟಕದ ಜನತೆಗೆ ಕೇಂದ್ರ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೇಳೆಕಾಳುಗಳಿಗೆ ಸಹಾಯ ಮಾಡಿ ಎಂದು ಕೇಳಿದರೂ ಅದು ಸಹ ಮಾಡಿಲ್ಲ. 15ನೇ ಹಣಕಾಸು ಆಯೋಗ ಆರಂಭವಾಗಿದೆ. ನಾವು ಕನಿಷ್ಟ ಶೇ. 50% ಕೊಡಿ ಎಂದು ಕೇಳಿದ್ದೇವು. ಆದರೆ, ಶೇ.41% ಮಾತ್ರ ಕೊಟ್ಟಿದ್ದಾರೆ. 14ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಶೇ.4.71% ಮಾತ್ರ. 14ನೇ ಹಣಕಾಸಿಗಿಂತ ಜಾಸ್ತಿ ಮಾಡಿ ಕೊಡಿ ಅಂದರೆ 4.131 ಮಾತ್ರ ಕೊಟ್ಟಿದ್ದಾರೆ. ಈ ಮೂಲಕ ಕರ್ನಾಟಕಕ್ಕೆ 14ನೇ ಹಣಕಾಸಿನಷ್ಟು ಕೂಡ ಹಣ ನೀಡಿಲ್ಲ. ಉತ್ತರ ಪ್ರದೇಶಕ್ಕೆ ಹಾಗೂ ಕರ್ನಾಟಕಕ್ಕೆ ಹಣಕಾಸಿನ ಹಂಚಿಕೆಯಲ್ಲಿ ಭಾರಿ ತಾರತಮ್ಯವಾಗಿ ನಮಗೆ ಅನ್ಯಾಯವಾಗಿದೆ ಎಂದಿದ್ದಾರೆ.

ರಾಜ್ಯವಾರು ಹಣ ಹಂಚಿಕೆ ನೋಡಿದರೆ ಬಿಹಾರ 9.948, ಯುಪಿ-17.691, ಗುಜರಾತ್ 3.755, ಕರ್ನಾಟಕಕ್ಕೆ 4.131, ಆಂಧ್ರ- 4.271 ಇದೆ. ನಾವು ತಲಾ ಆದಾಯದಲ್ಲಿ ನಂಬರ್ 1, ಜಿಎಸ್‌ಟಿ ಸಂಗ್ರಹದಲ್ಲಿ ಎರಡನೇ ಸ್ಥಾನ ಪಡೆದಿದ್ದೇವೆ. ಹೀಗಿದ್ರು ನಮಗೆ ಅನುದಾನ ಬಂದಿಲ್ಲ. ಬಜೆಟ್‌ಗೂ ಮುನ್ನ ನಮ್ಮ ರಾಜ್ಯದ ನೀರಾವರಿ, ಮೆಟ್ರೋ ಯೋಜನೆ, ಏಮ್ಸ್ ನೀಡಬೇಕು. ಕೆಕೆಆರ್ ಡಿಬಿಗೆ ಮ್ಯಾಚಿಂಗ್ ಗ್ರ‍್ಯಾಂಟ್ ಕೊಡಲು ಸಹ ಹೇಳಿದ್ದೇವೆ. ನಾವು ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ ಭಾಗಕ್ಕೆ 13 ಸಾವಿರ ಕೋಟಿ ಅನುದಾನ ನೀಡಿದ್ದೇವೆ. ನಾವು 100 ತೆರಿಗೆ ಕೊಟ್ಟರೆ 14 ರೂಪಾಯಿ ವಾಪಸ್ ಬರುತ್ತದೆ. ಉಳಿದ ಹಣ ಕೇಂದ್ರ ಸರ್ಕಾರ ಬಳಸುತ್ತದೆ. ಸೆಸ್ ಸಬ್‌ಚಾಜ್9 ಸಹ ಕೇಂದ್ರ ಕಲೆಕ್ಟ್ ಮಾಡಿ ರಾಜ್ಯಗಳಿಗೆ ಕೊಡುವುದಿಲ್ಲ. ಹೀಗಾಗಿ, 2026-27 ಬಜೆಟ್ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ವ್ಯಂಗ್ಯ ಮಾಡಿದ್ದಾರೆ

Related Articles

ಇತ್ತೀಚಿನ ಸುದ್ದಿಗಳು

You cannot copy content of this page