Home ರಾಜಕೀಯ ಕೇಂದ್ರ ಸಚಿವ ಸ್ಥಾನ ಹಾಗೂ ರಾಜ್ಯಸಭಾ ಸದಸ್ಯತ್ವಕ್ಕೆ ಎಲ್. ಮುರುಗನ್ ರಾಜೀನಾಮೆ: ತಮಿಳುನಾಡಿನಲ್ಲಿ ಪಕ್ಷ ಸಂಘಟನೆಗೆ...

ಕೇಂದ್ರ ಸಚಿವ ಸ್ಥಾನ ಹಾಗೂ ರಾಜ್ಯಸಭಾ ಸದಸ್ಯತ್ವಕ್ಕೆ ಎಲ್. ಮುರುಗನ್ ರಾಜೀನಾಮೆ: ತಮಿಳುನಾಡಿನಲ್ಲಿ ಪಕ್ಷ ಸಂಘಟನೆಗೆ ನಿರ್ಧಾರ!

0

ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ ತಮ್ಮ ಸಚಿವ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಮುಂಬರುವ 2029ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡಿನಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಇನ್ನಷ್ಟು ಬಲಪಡಿಸಲು ತಾವು ರಾಜ್ಯ ರಾಜಕೀಯಕ್ಕೆ ಮರಳಲು ನಿರ್ಧರಿಸಿರುವುದಾಗಿ ಅವರು ತಿಳಿಸಿದ್ದಾರೆ. ಸಚಿವ ಸ್ಥಾನದ ಜತೆಗೆ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಲು ಅನುಮತಿ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ತಮ್ಮ ನಿರ್ಧಾರದ ಕುರಿತು ಮಾತನಾಡಿದ ಮುರುಗನ್, “ದಿನಗೂಲಿ ಕಾರ್ಮಿಕರ ಮಗನಾಗಿ ಬೆಳೆದ ನನಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ನನ್ನ ಜೀವನದ ಅತಿ ದೊಡ್ಡ ಗೌರವ. ಈಗ ತಮಿಳುನಾಡಿನಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಕಾರ್ಯಕರ್ತರೊಂದಿಗೆ ಪೂರ್ಣಾವಧಿ ತೊಡಗಿಸಿಕೊಳ್ಳಲು ಬಯಸಿದ್ದೇನೆ. ದೇಶ ಮೊದಲು, ಪಕ್ಷ ನಂತರ, ನಾವೆಲ್ಲ ಕೊನೆಗೆ ಎಂಬ ತತ್ವಕ್ಕೆ ಬದ್ಧನಾಗಿ ಈ ಹೆಜ್ಜೆ ಇಟ್ಟಿದ್ದೇನೆ,” ಎಂದು ಹೇಳಿದ್ದಾರೆ.

ಡಾ. ಎಲ್. ಮುರುಗನ್ ಅವರ ಅನಿರೀಕ್ಷಿತ ರಾಜೀನಾಮೆಯು ಕೇಂದ್ರ ಸಚಿವ ಸಂಪುಟ ಪುನರ್‌ರಚನೆ ಮತ್ತು ವಿಸ್ತರಣೆಯ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಮುಂಬರುವ ದೀಪಾವಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸಂಪುಟ ಪುನರ್‌ರಚನೆಯಾಗುವ ಸಾಧ್ಯತೆಯಿದೆ ಎಂದು ರಾಜಕೀಯ ವಲಯದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಸರ್ಕಾರದ ಮೂಲಗಳ ಪ್ರಕಾರ, ಕನಿಷ್ಠ ಅರ್ಧ ಡಜನ್ (6) ಪ್ರಮುಖ ಖಾತೆಗಳಲ್ಲಿ ಹೊಸ ನೇಮಕಾತಿ ಅಥವಾ ಮಹತ್ವದ ಬದಲಾವಣೆಗಳು ನಡೆಯುವ ಸಾಧ್ಯತೆಯಿದೆ.

You cannot copy content of this page

Exit mobile version