ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿರುವ ಉತ್ತರ ಪ್ರದೇಶದ ಅಮೇಠಿಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಕಿಶೋರಿಲಾಲ್ ಶರ್ಮಾ ಇಲ್ಲಿ ಗೆಲುವ ದಾಖಲಿಸಿದ್ದಾರೆ
ಸ್ಮೃತಿ ಇರಾನಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಕಿಶೋರಿಲಾಲ್ ಶರ್ಮಾ ಸುಮಾರು ಒಂದು ಲಕ್ಷ ಮತಗಳಿಂದ ಸೋಲಿಸಿದ್ದಾರೆ. ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಅದೇ ಸ್ಥಾನದಲ್ಲಿ ಸೋಲಿಸುವ ಮೂಲಕ ಸ್ಮೃತಿ ಇರಾನಿ ದೇಶದ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದರು. ರಾಹುಲ್ ಗಾಂಧಿ ವಿರುದ್ಧ ಗೆದ್ದ ನಂತರ ಸ್ಮೃತಿ ಇರಾನಿ ಹೆಸರು ದೇಶಾದ್ಯಂತ ಪ್ರಸಿದ್ಧವಾಯಿತು.
ರಾಹುಲ್ ಗಾಂಧಿ ವಿರುದ್ಧ ಗೆದ್ದ ನಂತರ ಸ್ಮೃತಿ ಇರಾನಿ ಕೇಂದ್ರ ಸಚಿವ ಸ್ಥಾನವನ್ನೂ ಪಡೆದರು. ಇತ್ತೀಚಿನ ಚುನಾವಣೆಯಲ್ಲಿ ಸ್ಮೃತಿ ಇರಾನಿ ಮತ್ತೊಮ್ಮೆ ಅಮೇಥಿಯಿಂದ ಸ್ಪರ್ಧಿಸಿದ್ದರು, ಆದರೆ ಕಾಂಗ್ರೆಸ್ ರಾಹುಲ್ ಗಾಂಧಿ ಬದಲಿಗೆ ಮತ್ತೊಬ್ಬ ಪ್ರಬಲ ನಾಯಕ ಕಿಶೋರಿಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿತು. ಬಿಜೆಪಿ ಆಡಳಿತದ ವಿರುದ್ಧದ ವಿರೋಧದಿಂದಾಗಿ ಕಿಶೋರಲಾಲ್ ಶರ್ಮಾ ಗೆದ್ದರು.