Wednesday, March 26, 2025

ಸತ್ಯ | ನ್ಯಾಯ |ಧರ್ಮ

ಉನ್ನಾವೋ ಅತ್ಯಾಚಾರ ಪ್ರಕರಣ: ಸಂತ್ರಸ್ತೆಗೆ ಸಿಆರ್‌ಪಿಎಫ್ ಭದ್ರತೆ ಮುಂದುವರಿಕೆ

ದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ನೀಡಲಾಗಿದ್ದ ಸಿಆರ್‌ಪಿಎಫ್ ಭದ್ರತೆಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಿಬಿ ವರಾಳೆ ಅವರನ್ನೊಳಗೊಂಡ ಪೀಠವು, ಆಕೆಗೆ ಇನ್ನೂ ಬೆದರಿಕೆ ಇದೆ ಎಂದು ಹೇಳಿದೆ.

ಸಂತ್ರಸ್ತೆಯ ಕುಟುಂಬ ಸದಸ್ಯರು ಮತ್ತು ಇತರ ಸಾಕ್ಷಿಗಳಿಗೆ ಸಿಆರ್‌ಪಿಎಫ್ ಭದ್ರತೆಯನ್ನು ಹಿಂಪಡೆಯಲು ಪೀಠ ಅನುಮತಿ ನೀಡಿತು. ಕುಟುಂಬ ಸದಸ್ಯರು ಮತ್ತು ಇತರ ಸಾಕ್ಷಿಗಳು ಯಾವುದೇ ರೀತಿಯ ಬೆದರಿಕೆ ಎದುರಿಸಿದರೆ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಲು ಮುಕ್ತರು ಎಂದು ಪೀಠ ಹೇಳಿದೆ.

ಮಂಗಳವಾರದ ವಿಚಾರಣೆಯ ಸಂದರ್ಭದಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ಅವರು ಸಂತ್ರಸ್ತೆಯ ಭದ್ರತೆಯನ್ನು ಹಿಂಪಡೆಯಲು ನ್ಯಾಯಾಲಯದ ಅನುಮತಿಯನ್ನು ಕೋರಿದರು.

ಈ ಪ್ರಕರಣದಲ್ಲಿ ಬಿಜೆಪಿ ನಾಯಕ ಕುಲದೀಪ್ ಸಿಂಗ್ ಸೆಂಗರ್ ತಪ್ಪಿತಸ್ಥರೆಂದು ಸಾಬೀತಾಗಿದ್ದು, ಅವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಆದರೆ, ನ್ಯಾಯಾಲಯ ಈ ವಾದವನ್ನು ತಿರಸ್ಕರಿಸಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page