Thursday, September 11, 2025

ಸತ್ಯ | ನ್ಯಾಯ |ಧರ್ಮ

‌ಉತ್ತರ ಪ್ರದೇಶ| ಸಂಭಾಲ್ ಘಟನೆಗೆ ಬಿಜೆಪಿ ಸರ್ಕಾರವೇ ಹೊಣೆ: ಬೃಂದಾಕಾರಟ್

ಲಖನೌ: ಸಂಭಾಲ್‌ನಲ್ಲಿ ಮಸೀದಿ ಸಮೀಕ್ಷೆ ನಂತರದ ಘಟನೆಗಳಿಗೆ ಉತ್ತರ ಪ್ರದೇಶ ಸರ್ಕಾರವನ್ನು ಸಿಪಿಎಂ ಪಾಲಿಟ್‌ಬ್ಯೂರೋ ಸದಸ್ಯೆ ಬೃಂದಾ ಕಾರಟ್ ಟೀಕಿಸಿದ್ದಾರೆ. ಸಂಭಾಲ್ ಘಟನೆಯಲ್ಲಿ ಉತ್ತರ ಪ್ರದೇಶ ಸರ್ಕಾರದ ಷಡ್ಯಂತ್ರವಿದ್ದು, ಯೋಗಿ ಸರ್ಕಾರ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ವಿಧ್ವಂಸಕ ರಾಜಕಾರಣ ಮಾಡುತ್ತಿದೆ ಎಂದರು.

ಸಂಭಾಲ್‌ನ ಶಾಹಿ ಜಾಮಾ ಮಸೀದಿಗೆ ಭಾನುವಾರ ಭಾರಿ ಪೊಲೀಸ್ ಪಡೆ ನುಗ್ಗಿದ್ದು, ಇದನ್ನು ವಿರೋಧಿಸಿದ ಸ್ಥಳೀಯರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಹೀರಾಲಾಲ್ ಯಾದವ್ ಹೇಳಿದ್ದಾರೆ. ಮಸೀದಿ ಸರ್ವೆ ವಿರೋಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು. ಬೃಂದಾಕಾರಟ್ ಅವರು ಸುಪ್ರೀಂ ಕೋರ್ಟ್ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದರು.

1991ರಲ್ಲಿ ಜಾರಿಗೆ ಬಂದ ಪೂಜಾ ಸ್ಥಳಗಳ ಕಾಯಿದೆಯು ಸ್ವಾತಂತ್ರ್ಯಾ ನಂತರವೂ ದೇಶದಲ್ಲಿ ಧಾರ್ಮಿಕ ಪೂಜಾ ಸ್ಥಳಗಳ ಯಥಾಸ್ಥಿತಿ ಮುಂದುವರಿಯಬೇಕು ಎಂದು ಷರತ್ತು ವಿಧಿಸಿದೆ. ಇದಕ್ಕೆ ವ್ಯತಿರಿಕ್ತವಾಗಿ, ಕೆಳ ನ್ಯಾಯಾಲಯದ ತೀರ್ಪಿನ ಮೇಲೆ ಮಧ್ಯಪ್ರವೇಶಿಸಿ ಆ ಆದೇಶಗಳನ್ನು ರದ್ದುಗೊಳಿಸುವಂತೆ ಅವರು ಸುಪ್ರೀಂ ಕೋರ್ಟನ್ನು ಆಗ್ರಹಿಸಿದ್ದಾರೆ, ಇಲ್ಲದಿದ್ದರೆ ಮತಾಂಧ ರಾಜಕಾರಣಿಗಳು ಪದೇ ಪದೇ ಕೆಳ ನ್ಯಾಯಾಲಯಕ್ಕೆ ಹೋಗಿ ಅಂತಹ ಆದೇಶಗಳನ್ನು ಪಡೆಯುತ್ತಾರೆ. ಈ ಆದೇಶಗಳನ್ನು ಬಳಸಿಕೊಂಡು ಮಸೀದಿಗಳನ್ನು ಗುರಿಯಾಗಿಸಲಾಗುತ್ತದೆ. ಇದು ಧಾರ್ಮಿಕ ಹಿಂಸಾಚಾರಕ್ಕೆ ಕಾರಣವಾಗುತ್ತದೆ ಮತ್ತು ಸಂಭಾಲ್ ಘಟನೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page