Friday, July 4, 2025

ಸತ್ಯ | ನ್ಯಾಯ |ಧರ್ಮ

ನಾಮಪತ್ರ ಸಲ್ಲಿಸಿದ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಇಂದು ಮೊದಲ ಸೆಟ್ ನಾಮಪತ್ರ ಸಲ್ಲಿಸಿದರು.

ಇಂದು ಹಾಗೂ ವಿನೋಬ ನಗರದ ಅರ್ಧನಾರೀಶ್ವರ ದೇವಸ್ಥಾನದಲ್ಲಿ ತಮ್ಮ ಆರಾಧ್ಯ ದೈವ ಶಿವಕುಮಾರ ಸ್ವಾಮೀಜಿಗೆ ಗದ್ದುಗೆಗೆ ಪೂಜೆ ಸಲ್ಲಿಸಿದ ಸೋಮಣ್ಣ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು.

ತುಮಕೂರು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಶುಭಾ ಕಲ್ಯಾಣ್ ನಾಮಪತ್ರ ಸ್ವೀಕರಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಸೋಮಣ್ಣ ಜೊತೆ ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು. ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಸೇರಿದಂತೆ ಹಲವರು ಜೊತೆಗಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಸೋಮಣ್ಣ ಎರಡರಲ್ಲೂ ಸೋತಿದ್ದರು. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page