ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣದ ನೇರ ಆರೋಪಿ ಮಾಜಿ ಸಚಿವ ಬಿ ನಾಗೇಂದ್ರ ಬಂಧಿಸಲಾಗಿದ್ದು, ಅವರನ್ನು ಜುಲೈ 18ರವರೆಗೆ ಇಡಿ ತನ್ನ ವಶಕ್ಕೆ ಪಡೆದುಕೊಂಡಿದೆ.
ಈ ಹಿಂದೆ, ಪರಿಶಿಷ್ಟ ಪಂಗಡ ಇಲಾಖೆಯ ಸಚಿವರಾಗಿದ್ದ ಬಿ ನಾಗೇಂದ್ರವನ್ನು ಇಡಿ ಕಸ್ಟಡಿಗೆ ನೀಡಿ ನ್ಯಾ. ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.
ಎರಡು ದಿನಗಳ ಹಿಂದೆ ಇಡಿ ಅದಿಕಾರಿಗಳು ನಾಗೇಂದ್ರ, ಬಸನಗೌಡ ದದ್ದಲ್ ಸೇರಿ ಹಲವರ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಗುರುವರ ರಾತ್ರಿ ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ನಂತರ ಶನಿವಾರ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ಇರುವ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಎದುರು ಹಾಜರುಪಡಿಸಲಾಗಿತ್ತು. ಇಡಿ ಅವರ ಮನವಿಯನ್ನು ಆಲಿಸಿದ ನ್ಯಾ. ಸಂತೋಷ್ ಗಜಾನನ ಭಟ್ ಅವರು ನ್ಯಾಗೇಂದ್ರ ಅವರನ್ನು ಜುಲೈ 18ರವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.
ನಿಗಮದ ಮಾಜಿ ಎಂಡಿ ಪದ್ಮನಾಭ್ ಅವರು ನಾಗೇಂದ್ರರ ಸೂಚನೆಯ ಮೇಲೆ ಕೆಲವು ಬ್ಯಾಂಕ್ ಖಾತೆ ತೆರೆಯಲಾಗಿದೆ ಎಂದು ವಿಚಾರಣೆಯ ವೇಳೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ನಡೆದ ಸಭೆಗೆ ನಾಗೇಂದ್ರ ಹಾಜರಾಗಿರುವುದು ಸಿಸಿಟಿವಿಯಲ್ಲಿ ಕಂಡು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆಈಗಾಲೇ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಚಂದ್ರಶೇಖರ್ ಅವರ ಡೆತ್ ನೋಟ್ನಲ್ಲಿ ಸಚಿವ ಎಂದು ಉಲ್ಲೇಖವಾಗಿದೆ. ನಾಗೇಂದ್ರ ಆಪ್ತ ಹರೀಶ್ಗೆ ಪದ್ಮನಾಭ್ 25 ಲಕ್ಷ ರೂ. ನೀಡಿರುವ ಬಗ್ಗೆಯೂ ಇಡಿ ತನಿಖೆ ನಡೆಸಿದೆ. ಹಗರಣದಲ್ಲಿ ನಾಗೇಂದ್ರ ಪ್ರಮುಖ ಆರೋಪಿ ಎಂಬುದಕ್ಕೆ ಹಲವು ಸಾಕ್ಷ್ಯಗಳನ್ನು ಇಡಿ ಈಗಾಗಲೇ ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದೆ ಎನ್ನಲಾಗಿದೆ.