Saturday, January 10, 2026

ಸತ್ಯ | ನ್ಯಾಯ |ಧರ್ಮ

ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ನಾಗೇಂದ್ರಗೆ ಜಾಮೀನು ಮಂಜೂರು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬಿ.ನಾಗೇಂದ್ರ ಅವರನ್ನು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿ ಕೋರ್ಟಿಗೆ ಸಲ್ಲಿಸಿದರು.

ಆರೋಪಪಟ್ಟಿ ಸಲ್ಲಿಕೆಯ ಆಗುತ್ತಿದ್ದಂತೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಡಿ ಅಧಿಕಾರಿಗಳು ಇತ್ತೀಚಿಗೆ ಸಚಿವ ಬಿ ನಾಗೇಂದ್ರ ಸೇರಿದಂತೆ ಈ ಒಂದು ಪ್ರಕರಣದಲ್ಲಿ ಭಾಗಿಯಾದಂತಹ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಕೂಡ ಸಲ್ಲಿಸಿದ್ದರು.ಆದರೆ ಇಂದು ಬೆಂಗಳೂರಿನ 82ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯವು ಮಾಜಿ ಸಚಿವ ಬಿ ನಾಗೇಂದ್ರಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page