ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರಗೆ (B Nagendra) ಬಂಧನದ ಭೀತಿ ಎದುರಾಗಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ (Valmiki Corporation scam) ಸಂಕಷ್ಟಕ್ಕೆ ಸಿಲುಕಿರುವ ಬಿ.ನಾಗೇಂದ್ರ ನಿರೀಕ್ಷಣಾ ಜಾಮೀನು (Anticipatory bail) ಕೋರಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ನಾಳೆ (ಜ.14) ಅವರ ಭವಿಷ್ಯ ನಿರ್ಧಾರವಾಗಲಿದೆ. ಇಂದು (ಜ.13) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಸಂಬಂಧ ವಿಚಾರಣೆ ನಡೆಸಿದ್ದು, ನಾಳೆಗೆ ಆದೇಶವನ್ನು ಕಾಯ್ದಿರಿಸಿದೆ. ಶಾಸಕ ಬಿ.ನಾಗೇಂದ್ರ ಈಗಾಗಲೇ ಈ ಪ್ರಕರಣದಲ್ಲಿ ಬಹಳಷ್ಟು ದಿನಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ಇದೀಗ ಮತ್ತೆ ಅರೆಸ್ಟ್ ಆಗುವ ಭೇಟಿ ಎದುರಾಗಿದೆ.
ಮಹರ್ಷಿ ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಕೂಡ ತನಿಖೆಗೆ ಮುಂದಾಗಿದೆ. ಈ ಕಾರಣಕ್ಕೆ ಇನ್ನೆಲ್ಲಿ ಮತ್ತೆ ಬಂಧನಕ್ಕೆ ಒಳಗಾಗಬೇಕೋ ಎಂಬ ಆತಂಕದಲ್ಲಿ ಬಿ ನಾಗೇಂದ್ರ ಕೋರ್ಟ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
