Sunday, June 16, 2024

ಸತ್ಯ | ನ್ಯಾಯ |ಧರ್ಮ

ವಿಡಿಯೋ ವೈರಲ್: ಶಾಲೆಯಲ್ಲಿ ಶೌಚಾಲಯಗಳನ್ನು ಸ್ವಚ್ಚಗೊಳಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯ

ಉತ್ತರ ಪ್ರದೇಶ: ಬಲ್ಲಿಯಾ ಜಿಲ್ಲೆಯ ಸೋಹವ್ನ್ ಪ್ರದೇಶದ ಪಿಪ್ರಾಕಲಾದಲ್ಲಿನ ಪ್ರಾಥಮಿಕ ಶಾಲೆಯಲ್ಲಿ, ವಿದ್ಯಾರ್ಥಿಗಳನ್ನು ಬಲವಂತವಾಗಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ತೋರಿಸುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಮೂಲ ಶಿಕ್ಷಣಾಧಿಕಾರಿ ಮಣಿರಾಮ್ ಸಿಂಗ್ ಆದೇಶಿಸಿದ್ದಾರೆ.

ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವಾಗ, ವ್ಯಕ್ತಿಯೊಬ್ಬರು ವಿದ್ಯಾರ್ಥಿಗಳನ್ನು ನಿಂದಿಸುತ್ತಿದ್ದು, ಅದೇ ಘಟನೆಯ ಮತ್ತೊಂದು ವೀಡಿಯೊದಲ್ಲಿ, "ಶೌಚಾಲಯವನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ಶೌಚಾಲಯಕ್ಕೆ ಬೀಗ ಹಾಕುವುದಾಗಿ ಪ್ರಾಂಶುಪಾಲರು ಬೆದರಿಕೆ ಹಾಕಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಬಲ್ಲಿಯಾ ಪ್ರದೇಶದ‌ ಕ್ಷೇತ್ರ ಶಿಕ್ಷಣಾಧಿಕಾರಿ ಅಖಿಲೇಶ್ ಕುಮಾರ್ ಝಾ ಮಾತನಾಡಿ, ಶಿಕ್ಷಣ ಇಲಾಖೆಯು ವಿಡಿಯೋದ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸುತ್ತಿದೆ, ಒಂದು ವೇಳೆ ಇದು ನಿಜವಾಗಿದ್ದರೆ ಪ್ರಾಂಶುಪಾಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು