ಸಿಕ್ಕಿಂನಲ್ಲಿ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಈ ಘಟನೆಯಲ್ಲಿ ವಾಹನ ನಿಯಂತ್ರಣ ತಪ್ಪಿ 700 ಅಡಿ ಆಳದ ಕಣಿವೆಗೆ ಬಿದ್ದಿದೆ. ಈ ತೀವ್ರ ಅಪಘಾತದಲ್ಲಿ ನಾಲ್ವರು ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಸೇನಾ ಸಿಬ್ಬಂದಿ ಪಶ್ಚಿಮ ಬಂಗಾಳದ ಪೆಡಾಂಗ್‌ನಿಂದ ಸಿಕ್ಕಿಂನ ಪಾಕ್ಯೊಂಗ್‌ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಅವರು ಪ್ರಯಾಣಿಸುತ್ತಿದ್ದ ವಾಹನ ನಿಯಂತ್ರಣ ತಪ್ಪಿ ಸುಮಾರು 700ರಿಂದ 800 ಅಡಿ ಆಳದ ಕಣಿವೆಗೆ ಬಿದ್ದಿದೆ. ಈ ಘಟನೆಯಲ್ಲಿ ನಾಲ್ವರು ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರೆಲ್ಲರೂ ಪಶ್ಚಿಮ ಬಂಗಾಳದ ಬಿನಾಗೂರಿನ ಎನ್‌ರೂಟ್ ಮಿಷನ್ ಕಮಾಂಡ್ ಘಟಕಕ್ಕೆ ಸೇರಿದವರು ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.