ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಅವರು ಹಲವು ದಿನಗಳ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಸರಿಗಮ ವಿಜಿ ಅವರನ್ನು ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ಕೆಲವು ದಿನಗಳ ಹಿಂದೆ ಇನ್ನೇನು ಕೊನೆಯ ಹಂತ ತಲುಪಿದರು ಎಂಬ ರೀತಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.
ಆದರೆ ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಸರಿಗಮ ವಿಜಿ ಕೊನೆಯುಸಿರು ಎಳೆದರೆಂದು ಕುಟುಂಬ ಮೂಲಗಳು ದೃಢಪಡಿಸಿವೆ. ಹಲವು ದಿನಗಳ ಚಿಕಿತ್ಸೆಯ ನಂತರ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ನಟನಾಗಿ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ (1975) ಬಂದಿತು. 2018 ರ ಹೊತ್ತಿಗೆ ಅವರು ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸಂಸಾರದಲ್ಲಿ ಸರಿಗಮ , ಅವರು ನಿರ್ದೇಶಿಸಿದ ಮತ್ತು ನಟಿಸಿದ ರಂಗಭೂಮಿ ನಾಟಕ, 1390 ಕ್ಕೂ ಹೆಚ್ಚು ಬಾರಿ ಪ್ರದರ್ಶನಗೊಂಡಿದೆ.