Home ನಿಧನ ಸುದ್ದಿ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

0

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ತಮ್ಮ 89 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಅವರ ಕುಟುಂಬ ಮೂಲಗಳು ದೃಢಪಡಿಸಿದೆ. ಅವರು ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದಾಗಿ ತೀವ್ರ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಬಾಲಿವುಡ್‌ನ ಹೀ-ಮ್ಯಾನ್ ಎಂದು ಕರೆಯಲ್ಪಡುವ ಧರ್ಮೇಂದ್ರ ಆರು ದಶಕಗಳಿಗೂ ಹೆಚ್ಚು ಕಾಲದ ಗಮನಾರ್ಹ ಸಿನಿಮೀಯ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ಕೊನೆಯ ಸಿನೆಮಾ “ಇಕ್ಕಿಸ್” ಡಿಸೆಂಬರ್ 25 ರಂದು ಬಿಡುಗಡೆಯಾಗಲದೆ.

ಅವರು ಪತ್ನಿ ಹೇಮಾ ಮಾಲಿನಿ ಮತ್ತು ಆರು ಮಕ್ಕಳಾದ ನಟರಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್, ಇಶಾ ಡಿಯೋಲ್ ಮತ್ತು ಅಹಾನಾ ಡಿಯೋಲ್, ಅಜೀತಾ ಮತ್ತು ವಿಜೇತಾ ಅವರನ್ನು ಅಗಲಿದ್ದಾರೆ.

ಭಾರತೀಯ ಚಿತ್ರರಂಗದ ಶ್ರೇಷ್ಠ ನಟರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಧರ್ಮೇಂದ್ರ 1960 ರ ಚಲನಚಿತ್ರ ‘ದಿಲ್ ಭಿ ತೇರಾ ಹಮ್ ಭಿ ತೇರೆ’ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರಿಗೆ 2012 ರಲ್ಲಿ ಭಾರತ ಸರ್ಕಾರದಿಂದ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಆರು ದಶಕಗಳ ಕಾಲದ ಅವರ ವೃತ್ತಿಜೀವನದಲ್ಲಿ ಅವರು ‘ಯಾದೋನ್ ಕಿ ಬಾರತ್’, ‘ಮೇರಾ ಗಾಂವ್ ಮೇರಾ ದೇಶ್’, ‘ನೌಕರ್ ಬಿವಿ ಕಾ’, ‘ಫೂಲ್ ಔರ್ ಪತ್ತರ್’, ‘ಬೇಗಹಬಾಯ್’ ಮತ್ತು ಇತರ ಪ್ರಶಸ್ತಿ ವಿಜೇತ ಚಲನಚಿತ್ರಗಳನ್ನು ಮಾಡಿದರು.

You cannot copy content of this page

Exit mobile version