ಕನ್ನಡದ ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ ಅವರು ತಮ್ಮ 94 ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ವಿಧವಿಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.
94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಕನ್ನಡದ ಪ್ರಸಿದ್ಧ ಕಾದಂಬರಿಕಾರರಾಗಿ, ಬಲಪಂಥೀಯ ವಿಚಾರಧಾರೆಯ ಮೂಲಕವೇ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. 2023ರಲ್ಲಿ ಇವರಿಗೆ ಭಾರತ ಸರ್ಕಾರ ಪದ್ಮಭೂಷಣ ಪ್ರಶಸ್ತಿ ಕೊಟ್ಟು ಗೌರವಿಸಿದೆ.
ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. ಮೈಸೂರಿನಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.
ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದರೆ ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.
ಭೈರಪ್ಪ ಅವರ ಪ್ರಮುಖ ಕಾದಂಬರಿಗಳು
ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ – (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017).