ಹಾಸನ: ಹಾಸನ ನಗರದಲ್ಲಿ ರೈಲಿಗೆ ತಲೆಕೊಟ್ಟು ಪಶುವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿ ಓಷರ್‌ಸಿಂಗ್ (19), ಹರಿಯಾಣ ಮೂಲದವನು. ಹಾಸನದ ಪಶುವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ ಆತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನೆಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಆತ್ಮಹತ್ಯೆಗೆ ಮೊದಲು ಸ್ನೇಹಿತನೊಬ್ಬನೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದ ಓಷರ್‌ಸಿಂಗ್, ಬಳಿಕ ಹಾಸನ ನಗರದ ಡೈರಿ ಸರ್ಕಲ್ ಬಳಿ ಇರುವ ರೈಲ್ವೆ ಹಳಿಯ ಮೇಲೆ ಮಲಗಿ ರೈಲಿಗೆ ತಲೆಕೊಟ್ಟು ಪ್ರಾಣತ್ಯಾಗ ಮಾಡಿದನೆಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.