ಅತ್ಯಾಚಾರ ಪ್ರಕರಣದ ಆರೋಪಿ ಶಾಸಕ ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಎಸ್‌ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆತಂದು ವಿಕಾಸಸೌಧದ ಮೂರನೆ ಮಹಡಿಯ 334ನೇ ಕೋಣೆಯಲ್ಲಿ ಸ್ಥಳ ಮಹಜರು ನಡೆಸಿದರು. ಬೆಳಿಗ್ಗೆ 11 ಗಂಟೆಯಿಂದ 11.45 ರ ವರೆಗೂ ಸ್ಥಳ ಮಹಜರು ಮತ್ತು ವಿಚಾರಣೆ ನಡೆಯಿತು.
ಹಿಂದೆ ಮುನಿರತ್ನ ತೋಟಗಾರಿಕಾ ಸಚಿವರಾಗಿದ್ದ ಸಂದರ್ಭದಲ್ಲಿ ಮುನಿರತ್ನಗೆ ನೀಡಿದ್ದ ಕೊಠಡಿ ಇದಾಗಿದೆ. ಯಾವ ಸ್ಥಳದಲ್ಲಿ ಮುನಿರತ್ನ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಬಗ್ಗೆ ಸಂತ್ರಸ್ತೆಯಿಂದ ಲಿಖಿತ ಹಾಗೂ ಮೌಖಿಕ ಹೇಳಿಕೆ ಪಡೆದುಕೊಂಡು, ಸ್ಥಳ ಮಹಜರು ಪ್ರಕ್ರಿಯೆಯ ವಿಡಿಯೋ ಮಾಡಿಕೊಂಡಿದ್ದಾರೆ.