Home ಅಪರಾಧ ಡಾ.ಸೂರಜ್ ರೇವಣ್ಣ ವಿರುದ್ಧ ದೂರು ನೀಡಲು ಸಂತ್ರಸ್ತ ವ್ಯಕ್ತಿ ಪೊಲೀಸ್ ಠಾಣೆಗೆ

ಡಾ.ಸೂರಜ್ ರೇವಣ್ಣ ವಿರುದ್ಧ ದೂರು ನೀಡಲು ಸಂತ್ರಸ್ತ ವ್ಯಕ್ತಿ ಪೊಲೀಸ್ ಠಾಣೆಗೆ

0

ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಲೈ*ಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ವ್ಯಕ್ತಿ ಹೊಳೆನರಸೀಪುರದ ಗ್ರಾಮ ಪೊಲೀಸ್ ಠಾಣೆಗೆ ದೌಡಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ MLC ರಾಜ್ ರೇವಣ್ಣನನ್ನೂ ಹಾಸನದ ಸಿಇಎನ್ ಠಾಣೆಗೆ ಪೊಲೀಸರು ಕರೆದುಕೊ೦ಡು ಬಂದಿರುವ ಮಾಹಿತಿ ಸಿಕ್ಕಿದೆ.

ಎಎಸ್ಪಿ ವೆಂಕಟೇಶ್‌ ನಾಯ್ಡು ನೇತೃತ್ವದಲ್ಲಿ ಸಂತ್ರಸ್ತ ವ್ಯಕ್ತಿಯ ಹೇಳಿಕೆ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಹಾಸನದ ಪೊಲೀಸ್‌ ವರಿಷ್ಠಾಧಿಕಾರಿಗೆ ಸಂತ್ರಸ್ತ ದೂರು ಸಲ್ಲಿಸಿದ್ದು, ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಹೇಳಿಕೆ ಪಡೆಯಬೇಕಿದ್ದು, ಅದಕ್ಕಾಗಿ ಸಂತ್ರಸ್ತ ಗ್ರಾಮಾಂತರ ಠಾಣೆಗೆ ಬಂದಿದ್ದಾರೆ. ಹೇಳಿಕೆ ಪಡೆದ ನಂತರ ಪ್ರಕರಣ ದಾಖಲಾಗಲಿದೆ.

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಬಳಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಇದೇ ಹಾಸನದ ಸಿಇಎನ್‌ ಠಾಣೆಗೆ ತಾಂತ್ರಿಕ ಪುರಾವೆಗಳನ್ನು ಕಲೆ ಹಾಕಲು ಹೊಳೆನರಸೀಪುರ ಪೊಲೀಸರು ಆತನನ್ನು ಕರೆ ತಂದರೆ, ಮೊಬೈಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

You cannot copy content of this page

Exit mobile version