Friday, January 2, 2026

ಸತ್ಯ | ನ್ಯಾಯ |ಧರ್ಮ

ವಯನಾಡ್‌ ಭೂಕುಸಿತ ದುರಂತದ ಸಂತ್ರಸ್ತರಿಗೆ ಪುನರ್ವಸತಿ 300 ಮನೆಗಳ ನಿರ್ಮಾಣ – ಪಿಣರಾಯಿ ವಿಜಯನ್‌

ಕೇರಳ : ವಯನಾಡ್‌ ಭೂಕುಸಿತ ದುರಂತದ ಸಂತ್ರಸ್ತರಿಗೆ ಪುನರ್ವಸತಿ ಯೋಜನೆಯಡಿ ಸುಮಾರು 300 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಫೆಬ್ರುವರಿಯಲ್ಲಿ ಮನೆಗಳನ್ನು ಹಸ್ತಾಂತರಿಸುವ ಗುರಿ ಹೊಂದಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಗುರವಾರ ತಿಳಿಸಿದರು. ಇಲ್ಲಿನ ಮುಂಡಕ್ಕೈ ಮತ್ತು ಚೂರಲ್‌ಮಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದರಿಂದ ಹಾನಿಗೊಳಗಾದ ಕುಟುಂಬಗಳಿಗೆ ಕಲ್ಪೆಟ್ಟ ಬೈಪಾಸ್‌ ಬಳಿಯ ಎಲ್‌ಸ್ಟನ್‌ ಎಸ್ಟೇಟ್‌ ಪ್ರದೇಶದಲ್ಲಿ ‘ಟೌನ್‌ಶಿಪ್‌’ ನಿರ್ಮಿಸಲಾಗುತ್ತಿದೆ. ಅದರ ಭಾಗವಾಗಿ ಈ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಇಲ್ಲಿನ ಮುಂಡಕ್ಕೈ ಮತ್ತು ಚೂರಲ್‌ಮಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದರಿಂದ ಹಾನಿಗೊಳಗಾದ ಕುಟುಂಬಗಳಿಗೆ ಕಲ್ಪೆಟ್ಟ ಬೈಪಾಸ್‌ ಬಳಿಯ ಎಲ್‌ಸ್ಟನ್‌ ಎಸ್ಟೇಟ್‌ ಪ್ರದೇಶದಲ್ಲಿ ‘ಟೌನ್‌ಶಿಪ್‌’ ನಿರ್ಮಿಸಲಾಗುತ್ತಿದೆ. ಅದರ ಭಾಗವಾಗಿ ಈ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.  

ಈ ಯೋಜನೆಯು ತ್ವರಿತವಾಗಿ ಸಾಗುತ್ತಿದ್ದು, ಸುರಕ್ಷತೆ, ಗುಣಮಟ್ಟ ಮತ್ತು ದೀರ್ಘಕಾಲೀನ ಸುಸ್ಥಿರತೆಗೆ ಒತ್ತು ನೀಡಲಾಗಿದೆ. ಈ ಟೌನ್‌ಶಿಪ್‌ನಲ್ಲಿ 410 ಮನೆಗಳು ಬರಲಿದ್ದು, ಗೌರವಯುತ ಜೀವನ ನಡೆಸಲು ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒಳಗೊಂಡಿರುತ್ತವೆ ಎಂದು ಅವರು ಸ್ಪಷ್ಟಪಡಿಸಿದರು.‘ಲೈಫ್‌ ಮಿಷನ್‌’ ಮೂಲಕ ಇಲ್ಲಿಯವರೆಗೆ 4,76,076 ಮನೆಗೆಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಲಾಗಿದೆ. ಅನೇಕ ಕುಟುಂಬಗಳು ಸುರಕ್ಷಿತ ಮನೆಗಳಿಗೆ ಸ್ಥಳಾಂತರಗೊಂಡಿವೆ. ಫೆಬ್ರುವರಿಯಲ್ಲಿ ಈ ಸಂಖ್ಯೆ ಐದು ಲಕ್ಷ ತಲುಪಲಿದೆ. ಅಲ್ಲದೆ 1,24, 471 ಮನೆಗಳ ನಿರ್ಮಾಣ ಕಾರ್ಯವು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದೆ ಎಂದು ಅವರು ಅಂಕಿ ಅಂಶ ನೀಡಿದರು. 

Related Articles

ಇತ್ತೀಚಿನ ಸುದ್ದಿಗಳು

You cannot copy content of this page