ಮಧ್ಯಪ್ರದೇಶದ (Madhya Pradesh) ಮಂದೌರ್ ಜಿಲ್ಲೆಯ ಸರ್ಕಾರಿ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮದ ಹಿನ್ನಲೆ ತರಗತಿಯಲ್ಲಿ ಬಟ್ಟೆ (Crime) ಬದಲಾಯಿಸುತ್ತಿದ್ದಾಗ ಹುಡುಗಿಯರ ವಿಡಿಯೋ (Obscene Video) ರೆಕಾರ್ಡ್ ಮಾಡಿದ್ದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂದೌರ್ ಜಿಲ್ಲೆಯ ಭಾನಪುರ ಸರ್ಕಾರಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಹಿನ್ನಲೆ ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸಿಕೊಳ್ಳುತ್ತಿದ್ದರು. ಈ ಬಗ್ಗೆ ತಿಳಿದ ನಾಲ್ವರು ವಿದ್ಯಾರ್ಥಿಗಳು ಶಾಲಾ ಕೊಠಡಿಯ ಬಾಗಿಲಿನ ಮೇಲಿದ್ದ ಸಣ್ಣ ಜಾಗದಿಂದ ವಿಡಿಯೋ ಮಾಡಿದ್ದಾರೆ.
ಅಲ್ಲದೇ ಒಬ್ಬರ ಮೇಲೆ ಒಬ್ಬರು ಹತ್ತಿ ಬಟ್ಟೆ ಬದಲಾಯಿಸಿಕೊಳ್ಳುತ್ತಿರುವುದನ್ನು ನೋಡಿದ್ದಾರೆ. ಇದೀಗ ವಿದ್ಯಾರ್ಥಿಗಳ ಈ ಕೃತ್ಯದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾಲೇಜಿನ ಪ್ರಿನ್ಸಿಪಾಲ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸದ್ಯ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರನ್ನು ಬಂಧಿಸಿದ್ದು, ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಇನ್ನು ಬಂಧಿತರೆಲ್ಲರೂ 20 ರಿಂದ 22 ವರ್ಷ ವಯಸ್ಸಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದ್ದು, ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.