ಲಕ್ನೋ: ಮಹಾಕುಂಭಮೇಳದಲ್ಲಿ ಮಹಿಳಾ ಭಕ್ತರು ಸ್ನಾನ ಮಾಡುತ್ತಿರುವ ಘಟನೆಗಳು ರೆಕಾರ್ಡ್ ಆಗಿದ್ದು, ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ.
ಯುಪಿ ಪೊಲೀಸರು ಈ ಜನರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಎರಡು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಪ್ರಯಾಗ್‌ರಾಜ್‌ನ ಗಂಗಾ ನದಿಯಲ್ಲಿ ಮಹಿಳೆಯರು ಸ್ನಾನ ಮಾಡುವ ಮತ್ತು ಬಟ್ಟೆ ಬದಲಾಯಿಸುವ ವೀಡಿಯೊಗಳನ್ನು ಕೆಲವು ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ 2,000-3,000 ರೂ.ಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿವೆ.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್ ಮೂಲಕ ಇಂತಹ ವೀಡಿಯೊಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.