ವಿಧಾನಸೌಧದ ಮುಖ್ಯಮಂತ್ರಿ ಕಚೇರಿಗೆ ಸಿದ್ದರಾಮಯ್ಯ ಹೆಸರಿನ ನಾಮಫಲಕ

ಕರ್ನಾಟಕದ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಂತೆ, ವಿಧಾನಸೌಧದ ಸಿಎಂ ಕಚೇರಿಗೆ ಸಿದ್ದರಾಮಯ್ಯ ಹೆಸರಿನ ನಾಮಫಲಕವನ್ನು ಅಳವಡಿಸಲಾಗಿದೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧದ ಸಿಎಂ ಕಚೇರಿಯ ಹೊರಗೆ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕ ಹಾಕಲಾಗಿದೆ.

ಸಿದ್ದರಾಮನಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

Related Articles

ಇತ್ತೀಚಿನ ಸುದ್ದಿಗಳು