ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ನಿಧನ

ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಜಯ್‌ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್‌ ಪ್ರವಾಸಕ್ಕೆ ತೆರಳಿದ್ದಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಪ್ಪು ನಿಧನದ ಶಾಕ್‌ನಿಂದ ಹೊರ ಬಂದಾಗಲೇ ಮತ್ತೊಂದು ಆಘಾತಕಾರಿ ವಿಚಾರ ಕುಟುಂಬಕ್ಕೆ ಶಾಕ್‌ ನೀಡಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್‌ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ.

ನಿವೃತ್ತ ಅಸಿಸ್ಟೆಂಟ್‌ ಪೊಲೀಸ್‌ ಆಫೀಸರ್‌ ಬಿ.ಕೆ ಶಿವರಾಮ್‌ ಅವರ ಪುತ್ರಿ ಸ್ಪಂದನ ಅವರು ವಿಜಯ್‌ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ದಂಪತಿಗಳಿಗೆ ಒಬ್ಬ ಮಗನಿದ್ದಾನೆ.

Related Articles

ಇತ್ತೀಚಿನ ಸುದ್ದಿಗಳು