Saturday, January 24, 2026

ಸತ್ಯ | ನ್ಯಾಯ |ಧರ್ಮ

ವಿಜ್ಞಾನ, ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳು : ಸಿಎಂ ಬೊಮ್ಮಾಯಿ  

ಬೆಂಗಳೂರು : ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರವಿಶಂಕರ್ ಗುರೂಜಿಯವರ ಇಂಟರ್ ನಾಷನಲ್ ಆರ್ಟ್ ಆಫ್ ಲಿವಿಂಗ್ ಸೆಂಟರ್ ನಲ್ಲಿ ಆಯೋಜಿಸಲಾಗಿದ್ದ ದೀಪಾವಳಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಕ್ಟೋಬರ್‌ 26ರಂದು ಚಾಲನೆ ನೀಡಿದ್ದಾರೆ.

ಆರ್ಟ್ ಆಫ್ ಲಿವಿಂಗ್ ದೀಪಾವಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ʼಬದುಕಿನಲ್ಲಿ ಎದುರಾಗುವ ಕ್ಲಿಷ್ಟ ಪ್ರಶ್ನೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಲು ಇಂತಹ ಆಧ್ಯಾತ್ಮಿಕ ಕೇಂದ್ರಗಳು ಸಹಕಾರಿಯಾಗುತ್ತವೆ. ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಆಧ್ಯಾತ್ಮಿಕತೆ ವಿಜ್ಞಾನಕ್ಕೆ ಪ್ರೇರಣೆ ನೀಡಿದರೆ, ವಿಜ್ಞಾನ ಆಧ್ಯಾತ್ಮಿಕತೆಯನ್ನು ನಿರೂಪಿಸುತ್ತದೆʼ ಎಂದು ಹೇಳಿದರು.

ಭಾರತೀಯ ಸನಾತನ ಧರ್ಮಕ್ಕೆ ಐದು ಸಾವಿರ ವರ್ಷಗಳ ಇತಿಹಾಸವಿದೆ. ನಮ್ಮಲ್ಲಿ ಚರಿತ್ರೆ ಇದೆ. ಆದರೆ ಚಾರಿತ್ರ್ಯಬೇಕಿದೆ. ಭಕ್ತಿ ಎಂದರೆ ಕರಾರುರಹಿತ ಪ್ರೀತಿಯಾಗಿದ್ದು, ಗುರುವಿನಲ್ಲಿ ಭಕ್ತಿಯಿಂದ ಲೀನನಾದರೆ ಜೀವನದ ಅರ್ಥವನ್ನು ತಿಳಿಯಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಗುರೂಜಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page