Thursday, April 24, 2025

ಸತ್ಯ | ನ್ಯಾಯ |ಧರ್ಮ

 ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಗೆಲುವಿನ ಲಯಕ್ಕೆ ಮರಳಿದ RCB

 ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(IPL)ನ 42ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್(RR) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನ ಅಂಗಳದಲ್ಲಿ ಮೊದಲ ಗೆಲುವು ದಾಖಲಿಸಿದೆ.

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ RCB, ವಿರಾಟ್ ಕೊಹ್ಲಿ(70) ಹಾಗೂ ದೇವದತ್ತ ಪಡಿಕ್ಕಲ್(50) ಅವರ ಬಿರುಸಿನ ಅರ್ಧ ಶತಕಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ ಬರೋಬ್ಬರಿ 205 ರನ್ ಸೇರಿಸಿತು.

ಗೆಲುವಿಗೆ 206 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ರಾಯಸ್ಥಾನ ರಾಯಲ್ಸ್, ಯಶಸ್ವಿ ಜೈಸ್ವಾಲ್(49) ಹಾಗೂ ಧ್ರುವ್ ಜುರೆಲ್(47) ಅವರ ದಿಟ್ಟ ಹೋರಾಟದ ಹೊರತಾಗಿಯೂ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಇದರೊಂದಿಗೆ ಆರ್ ಸಿಬಿ 11 ರನ್ ಗಳಿಂದ ಗೆಲುವು ಸಾಧಿಸಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page