ಬೆಂಗಳೂರು : ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲು ರಾಜ್ಯ ಸರ್ಕಾರ 30 ಸಚಿವರನ್ನು ನಿಯೋಜಿಸಿ ಅಧಿಕೃತ ಆದೇಶ ಹೊರಡಿಸಿದೆ. ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಲಾಗಿದೆ. ಇದಕ್ಕೆ ವಿಧಾನಪರಿಷತ್ ಮಾಜಿ ಸದಸ್ಯ ಎ.ಎಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಸರ್ಕಾರದಲ್ಲಿ ಪ್ರತಿಯೊಂದು ವಿಚಾರದಲ್ಲೂ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡುತ್ತಿದ್ದು, ಸರ್ಕಾರಕ್ಕೆ ಕೆಲಸ ಮಾಡಲು ಬಿಡುತ್ತಿಲ್ಲ. ಕೂಡಲೇ ಸಿದ್ದರಾಮಯ್ಯ ಹಸ್ತಕ್ಷೇಪ ನಿಲ್ಲಿಸಬೇಕು ಎಂದರು. ಜೊತೆಗೆ ಹೊಸ ಸಿಎಂಗೆ ಕೆಲಸ ಮಾಡಲು ತಮಗೆ ಬೇಕಾದ ಕ್ಯಾಬಿನೆಟ್ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಹೆಚ್ ವಿಶ್ವನಾಥ್ ಹೇಳಿದರು. ಈ ವೇಳೆ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಶ್ವನಾಥ್, ಸಿದ್ದರಾಮಯ್ಯನವರಿಗೆ ಪುತ್ರ ವ್ಯಾಮೋಹ ಜಾಸ್ತಿಯಾಗಿದೆ. ಅನುಭವ ಇಲ್ಲದ ಮಂಗ ಯತೀಂದ್ರ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೊಟ್ಟಿದ್ದು ಸರಿಯಲ್ಲ. ಮೈಸೂರು ವಿಶ್ವವಿಖ್ಯಾತ ನಗರವಾಗಿದ್ದು, ಇಲ್ಲಿಗೆ ದೊಡ್ಡ ದೊಡ್ಡ ವ್ಯಕ್ತಿಗಳು ಆಗಮಿಸುತ್ತಾರೆ. ಅವರ ಜೊತೆ ವ್ಯವಹರಿಸಲು ಯತೀಂದ್ರಗೆ ಅನುಭವ ಇಲ್ಲ ಎಂದರು.
