Monday, July 28, 2025

ಸತ್ಯ | ನ್ಯಾಯ |ಧರ್ಮ

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರ ಬಂಧನ

ಮಂಗಳೂರು: ವಿಟ್ಲದಲ್ಲಿ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ.

ಜುಲೈ 29ರಂದು ವಿಟ್ಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಬಾಲಕಿಯ ತಾಯಿ ತನ್ನ ಮಗಳ ಮೇಲೆ ಐದು ವ್ಯಕ್ತಿಗಳು ವಿವಿಧ ದಿನಾಂಕಗಳಂದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಸುಕುಮಾರ್‌, ಕಮಲಾಕ್ಷ, ಅಕ್ಷಯ್, ಮತ್ತು ಜಯಪ್ರಕಾಶ್ ಎನ್ನುವ ನಾಲ್ವರನ್ನು ಬಂಧಿಸಿದ್ದಾರೆ. ಐದನೇ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ಬಂಧಿತರಲ್ಲಿ ಅಕ್ಷಯ್ ಪೇಂಟರ್ ಕೆಲಸ ಮಾಡುತ್ತಿದ್ದು, ಬೇರಿಪದವುನಲ್ಲಿರುವ ತನ್ನ ಅಣ್ಣನ ಮನೆಯಲ್ಲಿ ಉಳಿದುಕೊಂಡಿದ್ದ. ಕಮಲಾಕ್ಷ ಗಾರೆ ಕೆಲಸ ಮಾಡುತ್ತಿದ್ದರೆ, ಸುಕುಮಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ.

ಆರೋಪಿಗಳಲ್ಲಿ ಸುಕುಮಾರ್‌ ಮತ್ತು ಜಯಪ್ರಕಾಶ್‌ ಬಜರಂಗ ದಳಕ್ಕೆ ಸೇರಿದವರು ಎನ್ನಲಾಗುತ್ತಿದೆ

ಆದರೆ, ಸುಕುಮಾರ್ ಮತ್ತು ಜಯಪ್ರಕಾಶ್ ಬಜರಂಗದಳದೊಂದಿಗೆ ಸಂಬಂಧ ಹೊಂದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಗೋಪಾಲ್ ಕುತ್ತಾರ್ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page