Home ರಾಜಕೀಯ ʼವಿವೇಕ ಯೋಜನೆʼ: ತರಗತಿ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವುದರ ವಿರುದ್ಧ ಕರ್ನಾಟಕ ಕಾಂಗ್ರೆಸ್ ಅಭಿಯಾನ

ʼವಿವೇಕ ಯೋಜನೆʼ: ತರಗತಿ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವುದರ ವಿರುದ್ಧ ಕರ್ನಾಟಕ ಕಾಂಗ್ರೆಸ್ ಅಭಿಯಾನ

0

ಬೆಂಗಳೂರು: ರಾಜ್ಯ ಸರ್ಕಾರ ʼವಿವೇಕ ಯೋಜನೆʼ ಅಡಿಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಸರ್ಕಾರಿ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವುದರ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಅಭಿಯಾನ ಆರಂಭಿಸಿದೆ.

ʼಸಿಎಂ ಅಂಕಲ್‌ʼ ಎಂಬ ʼಹ್ಯಾಶ್‌ಟ್ಯಾಗ್‌ʼನೊಂದಿಗೆ ಅಭಿಯಾನವನ್ನು ಪ್ರಾರಂಭಿಸಿರುವ ಕಾಂಗ್ರೆಸ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತರಗತಿಗಳಿಗೆ ಬಣ್ಣ ಬಳಿಯುವ ಬದಲು, ಮೊದಲು ಮಕ್ಕಳಿಗೆ ಶೌಚಾಲಯಗಳನ್ನು ನಿರ್ಮಿಸಿರುವಂತೆ ಒತ್ತಾಯಿಸಿದೆ.ಈ ಅಭಿಯಾನದ ಮೂಲಕ, ಕಾಂಗ್ರೆಸ್ ಶಾಲಾ ಮಕ್ಕಳ ಪರವಾಗಿ ಬೊಮ್ಮಾಯಿ ಅವರನ್ನು ಪ್ರಶ್ನಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ʼರಾಜ್ಯದಾದ್ಯಂತ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಇದೆ. ಮಕ್ಕಳು ಶೌಚಾಲಯಗಳಿಲ್ಲದೆ ಹೆಣಗಾಡುತ್ತಿದ್ದಾರೆ. ಸಿಎಂ ಅಂಕಲ್, ಶಾಲಾ ಕಟ್ಟಡಗಳಿಗೆ ಕೇಸರಿ ಬಣ್ಣ ಬಳಿಯುವ ಮೊದಲು, ಮೊದಲು ಶೌಚಾಲಯಗಳನ್ನು ನಿರ್ಮಿಸಿ, ಮಕ್ಕಳಿಗೆ ಆರೋಗ್ಯಕರ ಕುಡಿಯುವ ನೀರು ಮತ್ತು ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸುವ ಸೌಲಭ್ಯಗಳನ್ನು ನೀಡಿʼ ಎಂದು ಒತ್ತಾಯಿಸಿದೆ.

ದೇಶದಲ್ಲಿ ಕೈಗಾರಿಕಾ ಮತ್ತು ವೈಜ್ಞಾನಿಕ ಕ್ರಾಂತಿಗೆ ಕಾರಣರಾದ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತಿದೆ, ಆದರೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳು ಏಕೆ ಮುಂದೆ ಬರುತ್ತಿಲ್ಲ? ಎಂದು ಕಾಂಗ್ರೆಸ್ ಕಿಡಿಕಾರಿದೆ.

ʼಗುಣಮಟ್ಟದ ಬೋಧನೆ ಇಲ್ಲ, ಸರಿಯಾದ ಮಧ್ಯಾಹ್ನದ ಊಟವಿಲ್ಲ, ನೀವು ಯಾವ ಕ್ರಮವನ್ನು ತೆಗೆದುಕೊಳ್ಳಲಿದ್ದೀರಿ? ಅಪೌಷ್ಟಿಕ ಮಕ್ಕಳಿಗೆ ಮೊಟ್ಟೆಗಳನ್ನು ನೀಡುವ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸುತ್ತಿಲ್ಲ. ಮೊದಲು ಮೊಟ್ಟೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಿ, ಆದರೆ ಮೊಟ್ಟೆಗಳನ್ನು ಖರೀದಿಸುವಲ್ಲಿಯೂ ಭ್ರಷ್ಟಾಚಾರಕ್ಕೆ ಅವಕಾಶ ನೀಡಬೇಡಿ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರವು ‘ವಿವೇಕ ಯೋಜನೆ’ಯಡಿ 8,100 ತರಗತಿ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಸುತ್ತಿದ್ದು,ಇದಲ್ಲದೆ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು 11 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಧ್ಯಾನದ ತರಗತಿಗಳನ್ನು ಪ್ರಾರಂಭಿಸಲು ಸಜ್ಜಾಗಿದೆ.

You cannot copy content of this page

Exit mobile version