hosದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಈ ಹಂತದಲ್ಲಿ 43 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹಕ್ಕುಗಳನ್ನು ರಕ್ಷಿಸಲು ಮತ್ತು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತದಾರರು ಮತ ಚಲಾಯಿಸುವಂತೆ ಮನವಿ ಮಾಡಿದರು.
ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಇಂಡಿಯಾ ಬ್ಲಾಕ್ ಪಕ್ಷಗಳಿಗೆ ಮತ ನೀಡಿ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮತದಾರರನ್ನು ಕೋರಿದರು.
”ಜಾರ್ಖಂಡ್‌ನ ಸೋದರ ಸೋದರಿಯರೇ, ಇಂದು ರಾಜ್ಯದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ನಿಮ್ಮ ಹಕ್ಕುಗಳನ್ನು ರಕ್ಷಿಸಲು, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ ಚಲಾಯಿಸುವಂತೆ ನಾನು ಎಲ್ಲ ಮತದಾರರಲ್ಲಿ ಮನವಿ ಮಾಡುತ್ತೇನೆ. ನೀವು ಇಂಡಿಯಾ ಬ್ಲಾಕ್‌ಗೆ ಮತ ಹಾಕಿ. ಚುನಾವಣೆಯ ಮೊದಲು ಇಂಡಿಯಾ ಬ್ಲಾಕ್ ಘೋಷಿಸಿದ ಏಳು ಭರವಸೆಗಳು ನಿಮ್ಮ ಜೀವನದಲ್ಲಿ ಸಮೃದ್ಧಿಯನ್ನು ತರುತ್ತವೆ.
ಇಂಡಿಯಾ ಬ್ಲಾಕ್ ಜಲ್ – ಜಂಗಲ್ – ಜಮೀನ್ (ನೀರು, ಅರಣ್ಯ, ಭೂಮಿ) ರಕ್ಷಿಸುತ್ತದೆ. ಸಾಮಾಜಿಕ ನ್ಯಾಯವನ್ನು ಬಲಪಡಿಸುತ್ತದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ‘ಆದಿವಾಸಿಗಳ ಗೌರವಕ್ಕಾಗಿ ಜಾರ್ಖಂಡ್‌ನ ಸ್ವಾಭಿಮಾನಕ್ಕಾಗಿ ಮತ ಚಲಾಯಿಸಿ. ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಭಾಗವಹಿಸಿ ಮತ ಚಲಾಯಿಸಿ ಮತ್ತು ಇಂಡಿಯಾ ಬ್ಲಾಕ್ ಗೆಲ್ಲುವಂತೆ ಮಾಡಿ” ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.