Saturday, October 5, 2024

ಸತ್ಯ | ನ್ಯಾಯ |ಧರ್ಮ

ಹರಿಯಾಣ ವಿಧಾನಸಭೆಗೆ ಮತದಾನ ಆರಂಭ

ಹರಿಯಾಣ: ಹರಿಯಾಣದಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಒಟ್ಟು 90 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,031 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಗಾಗಿ 20,632 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಸಂಜೆ 6ರವರೆಗೆ ಮತದಾನ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತದಾರರು ತಮ್ಮ ಹಕ್ಕು ಚಲಾಯಿಸಲು ಮತಗಟ್ಟೆಗಳಿಗೆ ಮುಗಿ ಬೀಳುತ್ತಿದ್ದಾರೆ. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ‘ಈ ಪ್ರಜಾಪ್ರಭುತ್ವದ ಪವಿತ್ರ ಉತ್ಸವದ ಭಾಗವಾಗಿ ಮತ್ತು ಮತದಾನದಲ್ಲಿ ಹೊಸ ದಾಖಲೆಯನ್ನು ಸ್ಥಾಪಿಸಿ. ಪ್ರಥಮ ಬಾರಿಗೆ ಮತದಾನ ಮಾಡಲಿರುವ ರಾಜ್ಯದ ಯುವ ಜನತೆಗೆ ನನ್ನ ವಿಶೇಷ ಶುಭಾಶಯಗಳು’ ಎಂದು ಆನ್‌ಲೈನ್ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಸಚಿವ ಹಾಗೂ ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತದಾನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, “ಜನರು ಇಂದೇ ಮತ ಚಲಾಯಿಸಬೇಕು, ಶಾಂತಿಯುತವಾಗಿ ಚುನಾವಣೆ ನಡೆಸಲು ಆಡಳಿತವು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ, ರಾಜ್ಯದಲ್ಲಿ 3ನೇ ಬಾರಿ‌ ಬಿಜೆಪಿ ಗೆಲ್ಲುವ ವಿಶ್ವಾಸವಿದೆ, ನಾವೇ ಸರ್ಕಾರ ರಚಿಸುತ್ತೇವೆ.’’ ಎಂದು ಖಟ್ಟರ್ ಹೇಳಿದರು.

ಜುಲಾನಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ಅವರು ಹರಿಯಾಣ ಚುನಾವಣೆಗೆ ಮತ ಚಲಾಯಿಸಲು ಚಾರ್ಕಿ ದಾದ್ರಿಯ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page