Saturday, April 27, 2024

ಸತ್ಯ | ನ್ಯಾಯ |ಧರ್ಮ

ಮತದಾನ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ: ಇಓ ಜೆರಾಲ್ದ್ ರಾಜೇಶ್ ಎಂ.

ಇಂದು ಮಂಡ್ಯ ಜಿಲ್ಲೆ ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾ.ಪಂ.ಯಲ್ಲಿ ಆಡಳಿತಾಧಿಕಾರಿಗಳು ತಾಲೂಕು ಪಂಚಾಯತಿ ಮಂಡ್ಯ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಆಡಳಿತ) ಬಾಬುರವರ ಅಧ್ಯಕ್ಷತೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಲೋಕ ಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾಗಿದೆ. ಪ್ರತಿಯೊಬ್ಬ ಮತದಾರರು ತಪ್ಪದೆ ಮತದಾನ ಮಾಡುವ ಮೂಲಕ ಚುನಾಚಣಾ ಹಬ್ಬದಲ್ಲಿ ಭಾಗವಹಿಸಬೇಕು ಎಂದು ತಾಲ್ಲೂಕು ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕಾಧಿಕಾರಿಗಳಾದ ಜೆರಾಲ್ಡ್ ರಾಜೇಶ್ ಎಂ ರವರು ಹೇಳಿದರು.

ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಮತದಾನ ಜಾಗೃತಿ ಕಾರ್ಯಕ್ರಮವನ್ನು ತಮ್ಮ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಬೇಕು. ಮತದಾನ ಮಾಡುವಂತೆ ಸ್ವೀಪ್ ಕಾರ್ಯಕ್ರಮದ ಮೂಲಕ ವ್ಯಾಪಕವಾಗಿ ಪ್ರಚಾರ ಮಾಡುವಂತೆ ತಿಳಿಸಿದರು.

ಸಾತನೂರು ಗ್ರಾಮದ ಬೀದಿಗಳಲ್ಲಿ ಮತದಾನ ಜಾಗೃತಿ ಜಾಥಾವನ್ನು ಆಯೋಜಿಸಿ, . ಮತದಾನದ ಜಾಗೃತಿ ಕುರಿತು ಸಾರ್ವಜನಿಕರ ಗಮನಸೆಳೆದು ಅರಿವು ಮೂಡಿಸಲಾಯಿತು ನಂತರ ಎಲ್ಲರಿಗೂ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಇದೇ ಸಂದರ್ಭದಲ್ಲಿ ರಂಗೋಲಿ ಸ್ಪರ್ಧೆ ಹಾಗೂ ವಿವಿಧ ಕ್ರೀಡಾ ಕೂಟಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಿಸಲಾಯಿತು.

ಇದೇ ವೇಳೆ ತಾಲ್ಲೂಕು ಪಂಚಾಯಿತಿ ತಾಲ್ಲೂಕು ಯೋಜನಾಧಿಕಾರಿಗಳಾದ ಶ್ರೀನಿವಾಸ್ ಹೆಚ್ ಆರ್, ಸಹಾಯಕ ನಿರ್ದೇಶಕರುಗಳಾದ ಮಲ್ಲೇಶ್ ಹಾಗೂ ಶ್ರೀಧರ್ ರವರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ನರೇಗಾ ಯೋಜನೆ ಹಾಗೂ ಎನ್ ಆರ್ ಎಲ್ ಎಂ ಸಿಬ್ಬಂದಿಗಳು , ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, NRLM ಸದಸ್ಯರು ಯೋಜನೆಯ ಸಿಬ್ಬಂದಿಗಳು, ಮಹಿಳಾ ಸ್ವಸಹಾಯ ಸಂಘದ ಎಂಬಿಕೆ ಎಲ್ ಸಿಆರ್ ಪಿ ಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು