Monday, June 17, 2024

ಸತ್ಯ | ನ್ಯಾಯ |ಧರ್ಮ

ಮಳೆಯಿಂದಾಗಿ ಗೋಡೆ ಕುಸಿತ: 9 ಮಂದಿ ಸಾವು ಇಬ್ಬರಿಗೆ ಗಂಭೀರ ಗಾಯ

ಲಕ್ನೋ: 24 ಗಂಟೆ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಇಬ್ಬರಿಗೆ  ಗಂಭೀರ ಗಾಯವಾಗಿದ್ದು, 9 ಮಂದಿ ಸಾವನ್ನಪ್ಪಿರುವ ದುರ್ಘಟನೆ ಲಕ್ನೋದಲ್ಲಿ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಗೊಂಡವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ನೊದಾ ಖಾಸಗಿ ಆಸ್ಪತ್ರೆಯ ನಿರ್ದೇಶಕ ಡಾ.ಆನಂದ್‌ ಓಜಾ ಅವರು , ಘಟನೆ ತಿಳಿದು ಬಂದಕೂಡಲೇ ಹಲವಾರು ಆಂಬುಲೆನ್ಸ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು, ನಂತರ ಅಪಘಾತದಲ್ಲಿ ಸಿಕ್ಕಿ ಹಾಕಿಕೊಂಡವರನ್ನು ಆಸ್ಪತ್ರೆಗೆ ತರಲಾಯಿತು, 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರು, ಇಬ್ಬರಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಘಟನೆ ತಿಳಿದಬಳಿಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು , ಮೃತಪಟ್ಟವರ ಕುರಿತು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ವಿಪತ್ತು ಪರಿಹಾರ ನಿಧಿಯಿಂದ 4 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು