Thursday, April 3, 2025

ಸತ್ಯ | ನ್ಯಾಯ |ಧರ್ಮ

ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ನಿರ್ಲಜ್ಜ ದಾಳಿ: ಸೋನಿಯಾ ಗಾಂಧಿ

ನವದೆಹಲಿ: ಒಂದು ಅಲ್ಪಸಂಖ್ಯಾತ ಸಮುದಾಯದ ಮೇಲಿನ ಅಸಹನೆಗಾಗಿ ವಕ್ಫ್ ಮಸೂದೆಯನ್ನು ತಿದ್ದುಪಡಿ ಮಾಡಹೊರಟಿರುವುದು ಸಂವಿಧಾನದ ಮೇಲಿನ ನಿರ್ಲಜ್ಜ ದಾಳಿಯಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕಳವಳ ವ್ಯಕ್ತಪಡಿಸಿದರು.

ಲೋಕಸಭೆಯು ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದ ಬಳಿಕ ಸಂವಿಧಾನ್ ಸದನದಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯು ಸಂವಿಧಾನವನ್ನು ಬುಡಮೇಲುಗೊಳಿಸುವ ಮತ್ತೊಂದು ಯತ್ನ, ಇದನ್ನೂ ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತದೆ. ಇದು ಸಮಾಜವನ್ನು “ಶಾಶ್ವತ ಧ್ರುವೀಕರಣ” ಸ್ಥಿತಿಯಲ್ಲಿಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿದೆ ಎಂದು ಅವರು ಹೇಳಿದರು.

12 ಗಂಟೆಗಳ ಚರ್ಚೆಯ ನಂತರ ಮಧ್ಯರಾತ್ರಿ ಹೊತ್ತಿಗೆ ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಲಾಯಿತು. ಮಸೂದೆ ಪರವಾಗಿ 288 ಮತ್ತು ವಿರುದ್ಧ 232 ಮತಗಳು ಬಿದ್ದವು. ಮಸೂದೆ ಗುರುವಾರ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ ಈ ಕುರಿತು ಸೋನಿಯಾಗಾಂಧಿ ಪ್ರತಿಕ್ರಿಯೆ ನೀಡಿದರು.

“ನಿನ್ನೆ, ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು, ಇಂದು ಅದು ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಮಸೂದೆಯನ್ನು ಬುಲ್ಡೋಜರ್ ಮೂಲಕ ರವಾನಿಸಲಾಗಿದೆ. ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ಈ ಮಸೂದೆ ಸಂವಿಧಾನದ ಮೇಲೆಯೇ ನಡೆಸಿದ ಒಂದು ನಿರ್ಲಜ್ಜ ದಾಳಿಯಾಗಿದೆ ಎಂದು ಆರೋಪಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page