Home ರಾಜ್ಯ ದಕ್ಷಿಣ ಕನ್ನಡ ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು: ಸಿ.ಎಂ.ಸಿದ್ದರಾಮಯ್ಯ

ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು: ಸಿ.ಎಂ.ಸಿದ್ದರಾಮಯ್ಯ

0

ಮಂಗಳೂರು ಮೇ 15: ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.

ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು.

ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ‌ ಎಂದರು.

ದೇಶದಲ್ಲಿ ಅನೇಕ ಸೂಫಿ, ಸಾಧು, ಸಂತರು, ಸಾಮಾಜಿಕ ಹರಿಕಾರರು ಬಂದು ಹೋಗಿದ್ದಾರೆ. ಇವರೆಲ್ಲರೂ ಮನುಷ್ಯ ಧರ್ಮವನ್ನು ಪ್ರತಿಪಾದಿಸಿದವರು. ಆದ್ದರಿಂದ ನಾವು ಮಾನವೀಯ ನೆಲೆಯಲ್ಲಿ ಸಮಾಜವನ್ನು ಬೆಸೆಯಬೇಕು ಎಂದರು.

ಉಳ್ಳಾಲ ದರ್ಗಾಕ್ಕೆ ಜಾತಿ, ಧರ್ಮದ ಮಿತಿ ಇಲ್ಲ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ದರ್ಗಾ ಎಂದರು.

ನಮ್ಮ ಸರ್ಕಾರದ ಕಾರ್ಯಕ್ರಮಗಳೂ ಸರ್ವ ಧರ್ಮ, ಸರ್ವ ಜಾತಿಯವರಿಗೆ ಸಲ್ಲುವಂಥವು ಎಂದರು.

You cannot copy content of this page

Exit mobile version