Home ರಾಜಕೀಯ ತಪ್ಪುಗಳಿಂದ ಪಾಠ ಕಲಿಯುತ್ತಿದ್ದೇವೆ: ರಾಹುಲ್

ತಪ್ಪುಗಳಿಂದ ಪಾಠ ಕಲಿಯುತ್ತಿದ್ದೇವೆ: ರಾಹುಲ್

0

ಪಾಟ್ನಾ: ಬಿಹಾರದಲ್ಲಿ ನಾವು ಹಿಂದೆ ಮಾಡಿದ ತಪ್ಪುಗಳಿಂದ ಪಾಠ ಕಲಿಯುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ರಾಜ್ಯದಲ್ಲಿ ತಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ದಲಿತರು, ಮಹಿಳೆಯರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಡಬ್ಲ್ಯೂಎಸ್) ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದರು.

ತೆಲಂಗಾಣದಲ್ಲಿ ತಮ್ಮ ಪಕ್ಷದ ನೇತೃತ್ವದ ಸರ್ಕಾರ ನಡೆಸಿದ ಜಾತಿ ಜನಗಣತಿಯಂತೆ ದೇಶಾದ್ಯಂತ ಜಾತಿ ಜನಗಣತಿ ನಡೆಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಸೋಮವಾರ ನಡೆದ ‘ಸಂವಿಧಾನ ಸುರಕ್ಷಾ ಸಮ್ಮೇಳನ’ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಮಾತನಾಡಿದರು.

ನಾವು (ಕಾಂಗ್ರೆಸ್) ಹಿಂದೆ ಮಾಡಬೇಕಾದಷ್ಟು ಕೆಲಸ ಬಿಹಾರದಲ್ಲಿ ಮಾಡಲಿಲ್ಲ. ಪಕ್ಷದ ಪರವಾಗಿ ಇದನ್ನು ಒಪ್ಪಿಕೊಂಡ ಮೊದಲ ವ್ಯಕ್ತಿ ನಾನೇ. ಆದರೆ ನಾವು ತಪ್ಪುಗಳಿಂದ ಕಲಿಯುತ್ತಿದ್ದೇವೆ. ನಾವು (ಮಹಾಘಟಬಂಧನ್ ಮೈತ್ರಿಕೂಟ) ಆರ್‌ಜೆಡಿ ಮತ್ತು ಎಡಪಂಥೀಯರೊಂದಿಗೆ ಅಧಿಕಾರಕ್ಕೆ ಬಂದ ನಂತರ, ರಾಜ್ಯದ ದಮನಿತ ವರ್ಗಗಳ ಉನ್ನತಿಗಾಗಿ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

ಬಿಹಾರದಲ್ಲಿ ಹೊಸದಾಗಿ ರಚನೆಯಾದ ಜಿಲ್ಲಾ ಕಾಂಗ್ರೆಸ್ ಸಮಿತಿಗಳಲ್ಲಿ ಮೂರನೇ ಎರಡರಷ್ಟು ಭಾಗವು ದಮನಿತ ಸಮುದಾಯಗಳ ನಾಯಕರಿದ್ದಾರೆ ಎಂದು ಅವರು ಹೇಳಿದರು.

You cannot copy content of this page

Exit mobile version