ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸಿಬಿಐನಿಂದ ಕೇಜ್ರಿವಾಲ್ ಅವರ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧದ ತನಿಖಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ. ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿಯವರಿಗೆ ಪೀಠವು, ”ಮಧ್ಯಂತರ ಜಾಮೀನು ನೀಡುತ್ತಿಲ್ಲ. ನೋಟಿಸ್ ಜಾರಿ ಮಾಡುತ್ತೇವೆ” ಎಂದು ಹೇಳಿದೆ
ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 23ಕ್ಕೆ ನಿಗದಿಪಡಿಸಲಾಗಿದೆ. ದೆಹಲಿ ಹೈಕೋರ್ಟ್ ಆಗಸ್ಟ್ 5ರಂದು ಕೇಜ್ರಿವಾಲ್ ಅವರ ಬಂಧನವನ್ನು ಎತ್ತಿಹಿಡಿದಿದೆ ಮತ್ತು ಸಿಬಿಐನ ಕ್ರಮಗಳಲ್ಲಿ ಯಾವುದೇ ದುರುದ್ದೇಶ ಕಂಡುಬಂದಿಲ್ಲ ಎಂದು ಹೇಳಿದೆ.