Friday, June 14, 2024

ಸತ್ಯ | ನ್ಯಾಯ |ಧರ್ಮ

ನಾವು ಚುನಾವಣಾ ಪ್ರಚಾರಕ್ಕೆ ಹೋಗುವಂತಿಲ್ಲ, ಕೇಂದ್ರದಿಂದ ನಮಗೆ ದಿಗ್ಬಂಧನ ಹಾಕಲಾಗಿದೆ : ರಾಹುಲ್ ಗಾಂಧಿ

‘ಕೇಂದ್ರ ಸರ್ಕಾರದ ಕಡೆಯಿಂದ ನಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ನಮ್ಮ ಪ್ರಚಾರ ಕಾರ್ಯ ಮಾಡಲು ಸಾಧ್ಯವಿಲ್ಲ. ನಾವು ನಮ್ಮ ಕಾರ್ಯಕರ್ತರು ಮತ್ತು ಅಭ್ಯರ್ಥಿಗಳನ್ನು ಬೆಂಬಲಿಸಲು ಸಾಧ್ಯವಿಲ್ಲ. ನಮ್ಮ ನಾಯಕರು ದೇಶದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ. ನಮ್ಮ ಜಾಹೀರಾತುಗಳನ್ನು ಹಾಕಲು ನಮಗೆ ಸಾಧ್ಯವಾಗುತ್ತಿಲ್ಲ’ ಎಂದು ರಾಹುಲ್ ಗಾಂಧಿ ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಬೆಳಿಗ್ಗೆ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ‘ಚುನಾವಣಾ ಪ್ರಚಾರಕ್ಕೆ ಎರಡು ತಿಂಗಳ ಮೊದಲೇ ನಮ್ಮ ಮೇಲೆ ದಿಗ್ಬಂಧನ ಹಾಕಲಾಗಿದೆ. ನಮ್ಮ ಪಕ್ಷದ ನಾಯಕರು, ಮುಖಂಡರು ಹಾಕು ಕಾರ್ಯಕರ್ತರು ಚುನಾವಣಾ ಪ್ರಚಾರಕ್ಕೆ ಹೋಗಲಾಗುತ್ತಿಲ್ಲ, ಕೇಂದ್ರ ಬಿಜೆಪಿ ಸರ್ಕಾರದಿಂದ ಅಧಿಕಾರ ದುರ್ಬಳಕೆ ಮಾಡಲಾಗುತ್ತಿದೆ’ ಎಂದು ದೂರಿದ್ದಾರೆ.

‘ಇದು ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಿಮಿನಲ್ ಕ್ರಮವಾಗಿದ್ದು, ಪ್ರಧಾನಿ ಮತ್ತು ಗೃಹ ಸಚಿವರಿಂದಲೇ ಈ ಕೃತ್ಯ ನಡೆದಿದೆ. ಚುನಾವಣೆಗೂ ಮುನ್ನವೇ ನಮ್ಮನ್ನು ಕುಗ್ಗಿಸಲು ಹುನ್ನಾರ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಚೌಕಟ್ಟನ್ನು ರಕ್ಷಿಸಬೇಕಾದ ಸಂಸ್ಥೆಗಳು ದೇಶದಲ್ಲಿದ್ದರೂ ಅದು ಆಗುತ್ತಿಲ್ಲ. ಯಾಕೆಂದರೆ ಆ ಎಲ್ಲಾ ಸಂಸ್ಥೆಗಳನ್ನು ಬಿಜೆಪಿ ಪಕ್ಷ ದುರುಪಯೋಗ ಮಾಡಿಕೊಂಡಿದೆ’ ಎಂದು ಆರೋಪಿಸಿದ್ದಾರೆ.

‘ಈ ಮಟ್ಟಿಗಿನ ಅನ್ಯಾಯ ನಡೆಯುತ್ತಿರುವಾಗ ಯಾವ ನ್ಯಾಯಾಲಯವೂ ಏನನ್ನೂ ಹೇಳುತ್ತಿಲ್ಲ, ಚುನಾವಣಾ ಆಯೋಗ ಮೌನವಾಗಿದೆ, ಬೇರೆ ಯಾವುದೇ ಸಂಸ್ಥೆಗಳು ಏನನ್ನೂ ಹೇಳುತ್ತಿಲ್ಲ, ಮಾಧ್ಯಮಗಳು ಏನನ್ನೂ ಹೇಳುತ್ತಿಲ್ಲ. ಇಂದು ಭಾರತದಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂಬುದನ್ನು ಸಾಭೀತುಪಡಿಸುತ್ತಿದೆ’ ಎಂದು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಆರೋಪ ನಡೆಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು