Sunday, June 23, 2024

ಸತ್ಯ | ನ್ಯಾಯ |ಧರ್ಮ

ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 14 :  ಅವರು ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಾನ ಅವಕಾಶಗಳಿಂದ, ನೆಮ್ಮದಿ ಶಾಂತಿಯಿಂದ ಕೂಡಿದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು  ಅಧಿಕಾರಕ್ಕೆ ತಂದಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ:

ಮುಂದುವರೆದು ಮಾತನಾಡಿದ ಅವರು “ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿ ರೋಡ್ ಶೋ ಮಾಡಿಸುವುದು ಮತ್ತು ನಡ್ಡಾರವರು ನರೇಂದ್ರ ಮೋದಿಯವರನ್ನು ನೋಡಿ ಮತ ನೀಡಿ ಎಂದರೂ ಜನ ಮತ ನೀಡಲಿಲ್ಲ ಎಂದರು. ಇನ್ನು ಮುಂದೆ ಪ್ರಧಾನಿ ಮೋದಿಯವರ ಮೇಲೆ ಅವಲಂಬಿತರಾಗಬೇಡಿ. ಅವರು ಬಂದ ಕಡೆಯಲೆಲ್ಲಾ ಬಿಜೆಪಿ ಸೋತಿದೆ.  1980 ರಲ್ಲಿ ಜನತಾ ಲೋಕದಳದಿಂದ ಲೋಕಸಭಾ ಸ್ಪರ್ಧಿಯಾಗಿದ್ದೆ. ಆ ಸಂದರ್ಭದಲ್ಲಿ ಮಂಜುನಾಥ್ ಎಂದು ಕಾಂಗ್ರೆಸ್ ಅವರ ಅಭ್ಯರ್ಥಿಯಾಗಿದ್ದಾಗ, ಇಂದಿರಾ ಗಂಧಿ ಹೆಸರು ಹೇಳಿ, ಚುನಾವಣೆ ಗೆಲ್ಲುತ್ತೀರಿ ಎಂದು ಅವರಿಗೆ ಹೇಳಿದರು. ಆ ಕಾಲದಲ್ಲಿಯೂ ಕಾಂಗ್ರೆಸ್ ನವರಿಗೆ ಅಲ್ಲ, ಇಂದಿರಾಗಾಂಧಿ ಹಸರು ಹೇಳಿದರೆ ಚುನಾವಣೆ ಗೆಲ್ಲುತ್ತಿದ್ದರು. ಅಂತೆಯೇ, ಮೋದಿಯವರಿಗೂ ಹೆಸರು ಇತ್ತು. ಆದರೆ ಈಗ ಅದು ಮಂಕಾಗುತ್ತಿದೆ. ಪ್ರಧಾನಿ ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಈಗ ಮಂಕಾಗುತ್ತಿದೆ. ಮೇಲಿದ್ದವರು ಕೆಳಗೆ , ಕೆಳಗಿದ್ದವರು ಮೇಲೆ ಬರಬೇಕು. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ” ಎಂದು ಹೇಳಿದರು.

 ಮುಂದುವರೆದು ಮಾತನಾಡಿದ ಅವರು “ಧರ್ಮಗಳ ನಡುವೆ ಬೆಂಕಿಯಿಡುವುದು ನಮ್ಮ ಪರಂಪರೆಯಲ್ಲ, ಕವಿರಾಜಮಾರ್ಗ ಶ್ರೀ ವಿಜಯ ದಲ್ಲಿ ಪರ ಧರ್ಮವನ್ನು, ಜೀವನ ಮಾರ್ಗಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದೇ ಆಸ್ತಿ ಮತ್ತುಒಡವೆ ಎಂದು ಅದರಲ್ಲಿ ತಿಳಿಸಿದ್ದಾರೆ.  ಅದೇ ಸಮಾಜದ ಆಸ್ತಿ ಎಂದು ಅಲ್ಲಿ ತಿಳಿಸಲಾಗಿದೆ. ನಮ್ಮ ದೇಶದಲ್ಲಿ ಧರ್ಮಗಳು  ಬೇರೆ ಇರಬಹುದು . ಆದರೆ ಎಲ್ಲ ಧರ್ಮಗಳ ಸಾರ ಒಂದೇ . ಮನುಷ್ಯರ ನಡುವೆ ಗೋಡೆ ಕಟ್ಟುವುದು, ಧರ್ಮಗಳ ನಡುವೆ ಬೆಂಕಿ ಇಡುವುದು ಅಮಾನವೀಯವಾದುದು. ಅದು ನಮ್ಮ ಪರಂಪರೆ ಅಲ್ಲ.  ಎಲ್ಲರದರಲ್ಲೂ  ವೈರುಧ್ಯಗಳಿದ್ದರೂ , ಏಕತೆಯನ್ನು ಕಾಣಬೇಕು. ಅದರಲ್ಲಿ ನಂಬಿಕೆ ಇಟ್ಟವರು ನಾವು. ಯಾವುದು ಒಂದು ಧರ್ಮ, ಜಾತಿಗೆ ಅಂಟಿಕೊಂಡವರಲ್ಲ” ಎಂದರು

1949, ನವೆಂಬರ್ 29ರಂದು ಅಂಬೇಡ್ಕರ್ ಅವರು ಐತಿಹಾಸಿಕ ಭಾಷಣ ಮಾಡಿದರು. ನಾವು ಎಲ್ಲರಿಗೂ ಸಮಾನತೆ ನೀಡಿದ್ದೇವೆ. ಒಂದು ಮತ, ಒಂದು ಮೌಲ್ಯ ಎಂದಿದ್ದಾರೆ. ಆದರೆ  ಸಾಮಾಜಿಕವಾಗಿ, ಆರ್ಥಿಕವಾಗಿ ಅಸಮಾನತೆ ಇದೆ. ಪ್ರಜಾಪ್ರಭುತ್ವದ ಸೌಧ ಧ್ವಂಸವಾಗುತ್ತದೆ ಎಂದು ಆಗಲೇ ಎಚ್ಚರಿಕೆ ನೀಡಿದ್ದರು ಎಂದರು. 

ಗೃಹ ಲಕ್ಷ್ಮಿ ಯೋಜನೆ ಕುರಿತು ಮಾತನಾಡುತ್ತಾ ಅವರು, “ಉತ್ತರ ಯೂರೋಪ್‌ ದೇಶಗಳಲ್ಲಿ Universal basic income ನೀತಿಯನ್ನು ಪಾಲಿಸುತ್ತಿದ್ದಾರೆ. ಇದೇ ರೀತಿ ನಾವು ಜನರ ಜೇಬಿಗೆ ದುಡ್ಡು ಹಾಕುತ್ತಿದ್ದೇವೆ. ಪಂಚ ಗ್ಯಾರೆಂಟಿಗಳ ಮೂಲಕ ಎಲ್ಲರಿಗೂ 5000 ರೂ. ಸಿಗುತ್ತದೆ.” ಎಂದು ಮುಖ್ಯಮಂತ್ರಿ ಹೇಳಿದರು

“ಗ್ಯಾರಂಟಿಗಳಿಗೆ ಷರತ್ತುಗಳನ್ನು ಹಾಕಿದ್ದೀರಿ, ಇಷ್ಟು ಯೋಜನೆಗಳಿಗೆ ಹಣ ಎಲ್ಲಿಂದ ಬರುತ್ತದೆ ಇತ್ಯಾದಿಯಾಗಿ ಟೀಕಿಸುತ್ತಿದ್ದಾರೆ. ಆದರೆ ಅವರ ತರ್ಕಗಳಲ್ಲಿ ವಿವೇಕವಿಲ್ಲ. ಗೃಹ ಜ್ಯೋತಿಯಡಿ ಎಲ್ಲರಿಗೂ 200 ಯೂನಿಟ್ ಕೊಡಿ ಎನ್ನುವುದು ಅವಿವೇಕದ ತರ್ಕ. ಬಿಜೆಪಿಯವರು ಎಂದಿಗೂ ಅಧಿಕಾರಕ್ಕೆ ಬರಬಾರದು . ರಾಜ್ಯ ಅಭಿವೃದ್ಧಿ ಆಗಲ್ಲ. ಜನಪರ ಕೆಲಸಗಳು ಆಗಲ್ಲ. ದಲಿತರಿಗೆ , ಬಡವರಿಗೆ , ರೈತರಿಗೆ ನ್ಯಾಯ ಸಿಗುವುದಿಲ್ಲ. ಬಿಜೆಪಿಯವರು ವಿರೋಧಪಕ್ಷದಲ್ಲಿ ಸಕ್ರಿಯವಾಗಿದ್ದಾರೆ. ರಾಜ್ಯದ ಜನತೆಯ ನಿರೀಕ್ಷೆಗೆ ತಕ್ಕಂತೆ ಮಾತನಾಡುತ್ತೇನೆ. ನಮ್ಮ ಸರ್ಕಾರದಿಂದ ರಾಜ್ಯದ ಜನತೆ ಸಂತುಷ್ಟರಾಗಿದ್ದಾರೆ” ಎಂದರು.

ಶಕ್ತಿ ಯೋಜನೆಯಿಂದ KSRTC ಗೆ ಶಕ್ತಿ

“ಕರ್ನಾಟಕ ರಾಜ್ಯದಲ್ಲಿ 7 ಕೋಟಿ ಜನರಲ್ಲಿ ಶೇ. 50 ರಷ್ಟು ಮಹಿಳೆಯರಿದ್ದಾರೆ.2011ರ ಜನಗಣತಿಯ ಪ್ರಕಾರ ಮಹಿಳೆಯರು ಕಡಿಮೆ ಇದ್ದರು. ಆದರೆ ಈಗ ಕೆಲ ವರದಿಗಳ ಪ್ರಕಾರ ಅಸಮಾನತೆ ಕಡಿಮೆಯಾಗುತ್ತಿದೆ.  ಎಲ್ಲ ಮಹಿಳೆಯರೂ ಖುಷಿಯಾಗಿದ್ದಾರೆ. ಇದುವರೆಗೆ  ಶಕ್ತಿ ಯೋಜನೆಯ ಮೂಲಕ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. 13 ಸಾವಿರ ಜನ ಕಂಡಕ್ಟರ್, ಸಾರಿಗೆ ಸಿಬ್ಬಂದಿ ನೇಮಕ ಹಾಗೂ 4000 ಬಸ್ ಖರೀದಿಸಲು ಸರ್ಕಾರ ತೀರ್ಮಾನಿಸಿದೆ. ಅವರ ಪ್ರಯಾಣದಿಂದ ಪ್ರವಾಸೋದ್ಯಮ, ಉದ್ಯೋಗ ಹೆಚ್ಚಾಗುತ್ತಿದೆ “ ಎಂದು ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ತಿಳಿಸಿದರು.

ಗೃಹ ಜ್ಯೋತಿ: ಜುಲೈ 1 ರಿಂದ ಜಾರಿಗೆ ಬರುತ್ತದೆ ಇದರಲ್ಲಿಯೂ ಹುಳುಕನ್ನು ಹುಡುಕುತ್ತಿದ್ದಾರೆ. ಸರಾಸರಿ ವಿದ್ಯುತ್ ವೆಚ್ಚ ಉಳಿತಾಯವಾದರೆ , ಆ ಹಣ ಜನರಿಗೆ ಉಳಿತಾಯವಾಗುತ್ತಿದೆ. ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳಡಿ ಎಸ್ ಸಿ ಎಸ್ ಟಿ ಸಮುದಾಯಗಳು 75 ಯೂನಿಟ್ ಬಳಸುತ್ತಾರೆ. ಅದರ ಸರಾಸರಿ ಮೇಲೆ ಶೇ. 10 ಸೇರಿಸಿ, ವಿದ್ಯುತ್ ಉಚಿತವಾಗುತ್ತದೆ ಎಂದು ವಿವರಿಸಿದರು.

ಗೃಹಲಕ್ಷ್ಮಿ – ದೇಶದಲ್ಲೇ  ಮಹಿಳಾ ಸಬಲೀಕರಣದ ಪ್ರಪ್ರಥಮ  ಯೋಜನೆ:

ಈ ಯೋಜನೆಗೆ ವರ್ಷಕ್ಕೆ 30 ಸಾವಿರ ಕೋಟಿ ರೂ. ಖರ್ಚಾಗುತ್ತದೆ.  ಆಗಸ್ಟ್ 16 ರಿಂದ ಮನೆಯ ಯಜಮಾನಿ ಖಾತೆಗೆ 2000 ರೂ. ನೀಡಲಾಗುವುದು. ಈ ವರ್ಷದ ಉಳಿದ ಅವಧಿಗೆ 17 ರಿಂದ 18 ಸಾವಿರ ಕೋಟಿ ಮೀಸಲಿಟ್ಟಿದೆ. ಇದರಿಂದ 1 ಕೋಟಿ 30 ಲಕ್ಷ ಕುಟುಂಬಗಳಿಗೆ ಲಾಭವಾಗಲಿದೆ. ಬೆಲೆಯೇರಿಕೆಯಿಂದ ತತ್ತರಿಸಿರುವ ಕುಟುಂಬಗಳಿಗೆ ಇದು ಒಂದಷ್ಟು ನಿರಾಳತೆಯನ್ನು ತರಲಿದೆ ಎನ್ನುವುದು ಮುಖ್ಯಮಂತ್ರಿಗಳ ಅಭಿಪ್ರಾಯ.

ಜನರು ಅನ್ನಕ್ಕಾಗಿ ಇನ್ನೊಬ್ಬರ ಎದುರು ಕೈ ಚಾಚಬಾರದು ಎನ್ನುವ ಕಾರಣಕ್ಕಾಗಿ ಅನ್ನಭಾಗ್ಯ ಯೋಜನೆ ಪರಿಚಯಿಸಲಾಗಿದೆ. ಇದಕ್ಕೆ ಒಂದು ತಿಂಗಳಿಗೆ 2,29,000 ಮೆ.ಟನ್ ಅಕ್ಕಿ ಬೇಕು. ಎಫ್‌ಸಿಐ ಅಕ್ಕಿ ನೀಡಲು ನಿರಾಕರಿಸಿದ ಕಾರಣ ಅಕ್ಕಿಯ ಬದಲು ಜನರಿಗೆ ನೇರ ಹಣ ವಿತರಿಸಲಿದ್ದೇವೆ ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು