ನೇಪಾಳ: ನೇಪಾಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈತಾಡಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದ ಬಸ್ ಅಪಘಾತದಲ್ಲಿ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸುಮಾರು 60 ಜನರಿದ್ದ ಈ ಬಸ್, ಗುಡ್ಡಗಾಡು ಪ್ರದೇಶದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. ಈ ಘಟನೆಯಲ್ಲಿ 45ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರಲ್ಲಿ 16 ಜನರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರನ್ನೂ ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಆದರೆ, ವಧು-ವರರು ಬೇರೆ ವಾಹನದಲ್ಲಿ ಪ್ರಯಾಣಿಸುತ್ತಿದ್ದರಿಂದ ಅವರು ಸುರಕ್ಷಿತವಾಗಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ನೇಪಾಳ ಸೇನೆ, ಪೊಲೀಸರು ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಹೊರತೆಗೆದಿದ್ದಾರೆ.
