Friday, June 14, 2024

ಸತ್ಯ | ನ್ಯಾಯ |ಧರ್ಮ

ಪಶ್ಚಿಮ ಬಂಗಾಳದಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ, ಇಬ್ಬರಿಗೆ ಗಾಯ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಬ್ಲಾಕ್‌ ಮಟ್ಟದ ಮುಖಂಡರ ನಿವಾಸಗಳನ್ನು ಶೋಧಿಸಲು ಹೋದಾಗ ಸಂದೇಶಕಲಿ ಗ್ರಾಮದ ಬಳಿ ದಾಳಿ ನಡೆದಿರುವುದು ಬೆಳಕಿಗೆ ಬಂದಿದೆ. ಟಿಎಂಸಿ ನಾಯಕನ ನಿವಾಸದ ಮುಂದೆ ಜಮಾಯಿಸಿದ ಬೆಂಬಲಿಗರು ಅಲ್ಲಿಗೆ ತಲುಪಿದ ತಕ್ಷಣ ಅಧಿಕಾರಿಗಳ ಮೇಲೆ ದಾಳಿ ನಡೆಸಿ ಅವರ ಕಾರುಗಳನ್ನು ಧ್ವಂಸಗೊಳಿಸಲಾಯಿತು ಎಂದು ಇಡಿ ತಂಡ ಹೇಳಿದೆ. ಕಾರಿನ ಗಾಜುಗಳು ಒಡೆದಿವೆ ಎನ್ನಲಾಗಿದೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿವರಗಳ ಪ್ರಕಾರ, ಇಡಿ ಇಂದು ಟಿಎಂಸಿ ನಾಯಕ ಶೇಖ್ ಷಹಜಹಾನ್ ಮತ್ತು ಬಂಗಾವ್ ಪುರಸಭೆಯ ಮಾಜಿ ಅಧ್ಯಕ್ಷ ಶಂಕರ್ ಆದಿಲ್ ಅವರ ನಿವಾಸಗಳ ಮೇಲೆ ಶೋಧ ನಡೆಸಲಿದೆ. ಶೇಖ್ ಷಹಜಹಾನ್ ಅವರು ಉತ್ತರ 24 ಪರಗಣ ಜಿಲ್ಲಾ ಪರಿಷತ್ತಿನ ಮೀನುಗಾರಿಕೆ ಮತ್ತು ಪ್ರಾಣಿ ಸಂಪನ್ಮೂಲ ಅಧಿಕಾರಿ ಮತ್ತು ಸಂದೇಶಕಲಿ 1 ಬ್ಲಾಕ್‌ನ ಅಧ್ಯಕ್ಷರಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು