Home ದೇಶ ಶಾಸಕರ ಸಹಿ ಫೋರ್ಜರಿ ಪ್ರಕರಣ: ಮಾಜಿ ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ,...

ಶಾಸಕರ ಸಹಿ ಫೋರ್ಜರಿ ಪ್ರಕರಣ: ಮಾಜಿ ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ, ತೀವ್ರ ಶೋಧ

0

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಸುಪ್ರೀಮೋ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದ್ದು, ಶಾಸಕರ ಸಹಿ ಫೋರ್ಜರಿ (ನಕಲಿ ಸಹಿ) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಅಪರಾಧ ತನಿಖಾ ಇಲಾಖೆ (CID) ಅಧಿಕಾರಿಗಳು ಅವರ ನಿವಾಸದಲ್ಲಿ ತಪಾಸಣೆ ನಡೆಸಿದ್ದಾರೆ.

ಒಂದೆಡೆ ಪಕ್ಷದ ಸಂಸದರು ಮತ್ತು ಶಾಸಕರು ಬಂಡಾಯವೆದ್ದು ಪ್ರತ್ಯೇಕ ಬಣಗಳನ್ನು ರಚಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಈ ಮಹತ್ವದ ಬೆಳವಣಿಗೆ ನಡೆದಿದೆ. ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆದುಕೊಳ್ಳಲು ವಿಧಾನಸಭಾ ಸ್ಪೀಕರ್‌ಗೆ ಸಿದ್ಧಪಡಿಸಿ ಸಲ್ಲಿಸಲಾಗಿದ್ದ ಅಧಿಕೃತ ಪತ್ರದಲ್ಲಿ ತಮ್ಮ ಸಹಿಗಳನ್ನು ಫೋರ್ಜರಿ ಮಾಡಲಾಗಿದೆ ಎಂದು ಟಿಎಂಸಿಯ ಬಂಡಾಯ ಶಾಸಕರು ಪೊಲೀಸರಿಗೆ ದೂರು ನೀಡಿದ್ದರು.

ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಈಗಾಗಲೇ ಮಮತಾ ಬ್ಯಾನರ್ಜಿ ಅವರ ಸೋದರಸಳ ಹಾಗೂ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಿದ್ದರು. ಅವರು ನೀಡಿದ ಕೆಲವು ಪ್ರಮುಖ ಮಾಹಿತಿಗಳ ಆಧಾರದ ಮೇಲೆ, ಸಿಐಡಿ ಅಧಿಕಾರಿಗಳ ತಂಡವು ಮಂಗಳವಾರ ಕೋಲ್ಕತಾದಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸ ಹಾಗೂ ಪಕ್ಷದ ಪ್ರಧಾನ ಕಚೇರಿಯ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ವ್ಯಾಪಕ ಶೋಧ ಕಾರ್ಯ ನಡೆಸಿದೆ. ಮಮತಾ ಬ್ಯಾನರ್ಜಿ ಅವರು ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರೊಂದಿಗೆ ಪ್ರಮುಖ ರಾಜಕೀಯ ಸಭೆಯಲ್ಲಿ ನಿರತರಾಗಿದ್ದ ಸಮಯದಲ್ಲೇ ಈ ದಾಳಿ ನಡೆದಿರುವುದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದೆ.

You cannot copy content of this page

Exit mobile version