Home ದೇಶ ‌ಚಿಲ್ಲರೆ ರಾಜಕಾರಣ ಬಿಟ್ಟು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಆಲೋಚಿಸಬೇಕು: ರಾಹುಲ್‌ ಗಾಂಧಿ

‌ಚಿಲ್ಲರೆ ರಾಜಕಾರಣ ಬಿಟ್ಟು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಆಲೋಚಿಸಬೇಕು: ರಾಹುಲ್‌ ಗಾಂಧಿ

0
ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ

ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಗಳು ಹೊರಬಂದ ನಂತರ, ಕೇರಳದಲ್ಲಿ ಅಧಿಕಾರವನ್ನು ಮರಳಿ ಪಡೆದಿರುವುದನ್ನು ಬಿಟ್ಟರೆ ಉಳಿದ ರಾಜ್ಯಗಳಲ್ಲಿ ಕಾಂಗ್ರೆಸ್ ನಿರೀಕ್ಷಿತ ಮಟ್ಟದ ಪ್ರಭಾವ ಬೀರಲು ಸಾಧ್ಯವಾಗಿಲ್ಲ. ಆದರೆ ತಮಿಳುನಾಡಿನಲ್ಲಿ ಸಿಂಗಲ್ ಡಿಜಿಟ್ ಸ್ಥಾನಗಳನ್ನು ಗೆಲ್ಲುವ ಮೂಲಕ ಮೈತ್ರಿ ಸರ್ಕಾರದ ಭಾಗವಾಗುವ ಅವಕಾಶ ಕಾಂಗ್ರೆಸ್‌ಗೆ ಲಭಿಸಿದೆ. ಇತ್ತ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಕೇವಲ ಎರಡು ಸ್ಥಾನಗಳನ್ನು ಗೆದ್ದಿದ್ದರೂ, ಅಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಸೋಲನ್ನು ಸಂಭ್ರಮಿಸುತ್ತಿರುವುದು ಕಂಡುಬಂದಿದೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸೋಲನ್ನು ಸಂಭ್ರಮಿಸಿದ ಸ್ವಪಕ್ಷದ ನಾಯಕರ ವರ್ತನೆಯ ಬಗ್ಗೆ ರಾಹುಲ್ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟಿಎಂಸಿ ಸೋಲನ್ನು ನೋಡಿ ಮುಸಿಮುಸಿ ನಗುತ್ತಾ ಸಂಭ್ರಮಿಸುವುದು ಸರಿಯಲ್ಲ ಎಂದು ಅವರು ಎಚ್ಚರಿಸಿದ್ದಾರೆ. ಬಂಗಾಳ ಮತ್ತು ಅಸ್ಸಾಂನಲ್ಲಿ ಜನರ ತೀರ್ಪನ್ನು ಅಪಹರಿಸಿರುವುದು ಭಾರತೀಯ ಪ್ರಜಾಪ್ರಭುತ್ವವನ್ನು ನಾಶಪಡಿಸಲು ಬಿಜೆಪಿ ಇಟ್ಟಿರುವ ಮತ್ತೊಂದು ಹೆಜ್ಜೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದು ಕೇವಲ ಒಂದು ಪಕ್ಷಕ್ಕೆ ಸಂಬಂಧಿಸಿದ ವಿಷಯವಲ್ಲ, ಬದಲಾಗಿ ದೇಶದ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದ ವಿಚಾರವಾಗಿದೆ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಚಿಲ್ಲರೆ ರಾಜಕಾರಣವನ್ನು ಬದಿಗಿಟ್ಟು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಆಲೋಚಿಸಬೇಕು ಎಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮಮತಾ ಬ್ಯಾನರ್ಜಿ ಅವರ ಪರವಾಗಿ ನಿಂತಿದ್ದು, ಬಂಗಾಳದಲ್ಲಿ ಮತಗಳ ಕಳ್ಳತನ ನಡೆದಿದೆ ಎಂಬ ಅವರ ಆರೋಪವನ್ನು ಬೆಂಬಲಿಸಿದ್ದಾರೆ. ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಮತಗಳನ್ನು ದೋಚಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಬಂಗಾಳದಲ್ಲಿ ನೂರಕ್ಕೂ ಹೆಚ್ಚು ಸ್ಥಾನಗಳು ಅನ್ಯಾಯದ ರೀತಿಯಲ್ಲಿ ಬಿಜೆಪಿಯ ಪಾಲಾಗಿವೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡುವುದು ಮತ್ತು ಮತ ಎಣಿಕೆ ಕೇಂದ್ರಗಳಲ್ಲಿ ಸಂಶಯಾಸ್ಪದ ಚಲನವಲನಗಳು ನಡೆದಿರುವುದು ದೊಡ್ಡ “ಎಲೆಕ್ಷನ್ ಮ್ಯಾನಿಪುಲೇಷನ್ ಪ್ಲೇಬುಕ್” (Election Manipulation Playbook) ನ ಭಾಗ ಎಂದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

You cannot copy content of this page

Exit mobile version