ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಗೂಡ್ಸ್ ರೈಲೊಂದು ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 5 ಜನರು ಸಾವನ್ನಪ್ಪಿದ್ದಾರೆ ಮತ್ತು 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿದ್ದಾರೆ.
ಎನ್ಎಫ್ಆರ್ ವಲಯದಲ್ಲಿ ದುರದೃಷ್ಟಕರ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ, ರಕ್ಷಣಾ ಕಾರ್ಯಾಚರಣೆಗಳು ಯುದ್ದೋಪಾದಿಯಲ್ಲಿ ನಡೆಯುತ್ತಿವೆ. ರೈಲ್ವೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಪರಿಹಾರ ಕಾರ್ಯದಲ್ಲಿ ತೊಡಗಿವೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಪರಿಸ್ಥಿತಿ ಈಗಲೂ ಗಂಭೀರವಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ರಾಯ್ ತಿಳಿಸಿದ್ದಾರೆ. ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 25 ಮಂದಿ ಗಾಯಗೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ಪರಿಹಾರ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಮತ್ತು ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ. ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ.