ಉದ್ಯೋಗಿಯ ಅನಧಿಕೃತ ರಜೆಯನ್ನು ಕಾರ್ಮಿಕ ನ್ಯಾಯಾಲಯಗಳು ಲಘುವಾಗಿ ಪರಿಗಣಿಸಬಾರದು, ಇದು ಶಿಕ್ಷಾರ್ಹ ಎಂದು ಹೈಕೋರ್ಟ್ ಕಾರ್ಮಿಕ ನ್ಯಾಯಾಲಯಗಳಿಗೆ ಸೂಚನೆ ನೀಡಿದೆ.
ಅನಧಿಕೃತವಾಗಿ ಉದ್ಯೋಗಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕ ಕಂ ನಿರ್ವಾಹಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದ ಬಿಎಂಟಿಸಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕ ಕಂ ನಿರ್ವಾಹಕ ಹುದ್ದೆಯಿಂದ ರಾಯಚೂರಿನ ಟಿ. ದೇವಪ್ಪ ಅವರನ್ನು ವಜಾಗೊಳಿಸಿದ್ದ ತನ್ನ ಕ್ರಮವನ್ನು ರದ್ದುಪಡಿಸಿದ ಕಾರ್ಮಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಈ ಮೇಲ್ಮನವಿಯನ್ನು ನ್ಯಾಯಪೀಠ ಪುರಸ್ಕರಿಸಿದೆ.
ಬಿಎಂಟಿಸಿ ಉದ್ಯೋಗಿ ದೇವಪ್ಪನನ್ನು ಸೇವೆಗೆ ಮರು ನಿಯೋಜಿಸಲು ಬಿಎಂಟಿಸಿಗೆ ನಿರ್ದೇಶಿಸಿದ ಕಾರ್ಮಿಕ ನ್ಯಾಯಾಲಯದ ಆದೇಶ ದೋಷಪೂರಿತವಾಗಿದೆ ಎಂದು ಹೈಕೋರ್ಟ್ ಹೇಳಿದೆ.