ನನ್ನ ಸ್ಥಾನ ಏನೆಂಬುವುದು ಅಧ್ಯಕ್ಷ ಹುದ್ದೆಯ ಚುನಾವಣೆ ನಡೆದಾಗ ಸ್ಪಷ್ಟವಾಗುತ್ತದೆ : ರಾಹುಲ್‌ ಗಾಂಧಿ

ತಮಿಳುನಾಡು: ʼನಾನು ಕಾಂಗ್ರೆಸ್ ಅಧ್ಯಕ್ಷನಾಗುತ್ತೇನೆಯೇ ಅಥವಾ ಇಲ್ಲವೇʼ ಎಂಬುದು ಅಧ್ಯಕ್ಷ ಹುದ್ದೆಯ ಚುನಾವಣೆ ನಡೆದಾಗ ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ, ಪಕ್ಷದ ಕಾರ್ಯಕರ್ತರು ಏನು ಮಾಡಬೇಕೆಂದು ಸ್ಪಷ್ಟವಾಗಿ ನಿರ್ಧರಿಸಿದ್ದಾರೆ ಮತ್ತು ಅವರ ನಿರ್ಧಾರದ ಬಗ್ಗೆ ನನ್ನ ಮನಸ್ಸಿನಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಅವರು ʼನಾನು ಕಾಂಗ್ರೆಸ್‌ ಪಕ್ಷದ ಸದಸ್ಯ ಮತ್ತು ಭಾರತ್‌ ಜೋಡೋ ಯಾತ್ರೆಯ ಭಾಗವಾಗಿದ್ದೇನೆ. ಸದ್ಯಕ್ಕೆ ಭಾರತವನ್ನು ಒಗ್ಗುಡಿಸುವುದು ನಮ್ಮ ಮೊದಲ ಗುರಿಯಾಗಿದೆʼ ಎಂದರು.

Related Articles

ಇತ್ತೀಚಿನ ಸುದ್ದಿಗಳು